ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರಗೊಂಡ ಹೆಬ್ಬಾರ್ ಸಮ್ಮಿಶ್ರ ಸರ್ಕಾರ ಕೆಡವಲು ಸಹಕಾರ ಕೋರಿದ ಕಥೆ ಬಿಚ್ಚಿಟ್ಟ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್

1553

ಕಾರವಾರ:- ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರು ಕೇಳುವದೆ ಉನ್ನತ ಖಾತೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.ಕೆಡಿಸಿಸಿ ಬ್ಯಾಂಕಿನ ಶತಮಾನೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡುವ ವೇಳೆ ಹಾಸ್ಯ ಚಟಾಕಿ ಹಾರಿಸಿದ ಅವರು,ಜನರ ಎದುರು ನಾವು ಮಣ್ಣಿನ ಮಕ್ಕಳು ಎನ್ನುತ್ತಾರೆ.

ಮುಖ್ಯಮಂತ್ರಿ ಎದುರು ಪಿಡಬ್ಲ್ಯೂಡಿ, ನೀರಾವರಿ, ಗೃಹ ಖಾತೆಯ ಬೇಡಿಕೆ ಇಡುತ್ತಾರೆ ಎಂದರು.ಸಹಕಾರ, ಕಾರ್ಮಿಕ, ಕೃಷಿ ಖಾತೆ ಯಾರೂ ಬೇಡಿಕೆ ಇಡುವುದಿಲ್ಲ.‌ ನಾವೆಲ್ಲ ಬೇಡದ ಖಾತೆಯನ್ನು ಪಡೆದು ಒಳ್ಳೆಯ ಕೆಲಸಮಾಡುತ್ತಿದ್ದೇವೆ’ ಎಂದರು.ಸಚಿವ ಸ್ಥಾನ ನೀಡದ್ದಕ್ಕೆ ಬೇಸರಗೊಂಡಿದ್ದ ಶಿವರಾಮ ಹೆಬ್ಬಾರ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಕೆಡವಲು ಸಹಕಾರ ಕೋರಿದ್ದರು.

ನಾನು ಭೈರತಿ ಸೇರಿ ಎಲ್ಲರೂ ಅವರಿಗೆ ಕೈಜೋಡಿಸಿದೆವು’ ಎಂದು ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಸಮ್ಮುಖದಲ್ಲೇ ಹೇಳಿದರು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಸಹ ಉಪಸ್ಥಿತರಿದ್ದರು.


ಇನ್ನು ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ ಬಳಿಕ ರಾಜ್ಯದ ಜನರಿಗೆ ಉತ್ತಮ ಸಂದೇಶ ಹೋಗಿದೆ, ಬೊಮ್ಮಾಯಿ ನೇತೃತ್ವದಲ್ಲಿ ಒಂದು ಮುಕ್ಕಾಲು ವರ್ಷ ರಾಜ್ಯದ ಜನರು ಆರಾಮವಾಗಿರಬಹುದು,ಒಳ್ಳೊಳ್ಳೆ ಕಾರ್ಯಕ್ರಮ ಮಾಡ್ತಾರೆ, ತಾಳ್ಮೆಯಿಂದ ಇರುತ್ತಾರೆ ಎಂಬ ಸಂದೇಶ ಜನರಿಗೆ ಹೋಗಿದೆ,ಬಿಜೆಪಿ ಪಕ್ಷ ಹಾಗೂ ಮುಖಂಡರ ಮೇಲಿನ ವಿಶ್ವಾಸದಿಂದ ಜನರು ಮತ ಹಾಕಿದ್ದಾರೆ,
ಅದನ್ನು ಉಳಿಸುವ ಕೆಲಸವನ್ನು ರಾಜ್ಯ ಸರಕಾರ ಮಾಡುತ್ತಿದೆ.ಬೆಲೆ ಏರಿಕೆ ವಿಚಾರ ಸಂಬಂಧಿಸಿ ಸಿಎಂ 7-8ರಂದು ದೆಹಲಿಗೆ ತೆರಳುತ್ತಿದ್ದಾರೆ, ಅದರ ಬಗ್ಗೆ ಪ್ರಧಾನಿ ಹಾಗೂ ಸಂಬಂಧಪಟ್ಟ ಸಚಿವರ ಜತೆ ಮಾತನಾಡುತ್ತಾರೆ ಎಂದರು.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!