ಕಾರವಾರ :- ಈ ಬಾರಿಯ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುವ ವಿಶ್ವಾಸವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಖಾಸಗಿ ಕಾರ್ಯಕ್ರಮದ ನಿಮಿತ್ತ ಇಂದು ನಗರದ ಎಂಇಎಸ್ ಕಾಲೇಜು ಮೈದಾನದ ಹೆಲಿಪ್ಯಾಡ್ ಗೆ ಬಂದಿಳಿದ ವೇಳೆ ಮಾಧ್ಯಮದವರ ಜತೆ ಮಾತನಾಡಿದ ಅವರು, ‘ದೇಶದಲ್ಲೇ ಕರ್ನಾಟಕ ಆರೋಗ್ಯ ಕ್ಷೇತ್ರದಲ್ಲಿ ಮಾದರಿ ರಾಜ್ಯವಾಗಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಬಜೆಟ್ ನಲ್ಲಿ ಹೆಚ್ಚು ಅನುದಾನ ಘೋಷಿಸಲಿದ್ದಾರೆ’ ಎಂದರು.