Sirsi:ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ:1.30 ಲಕ್ಷ ರೂ. ಮೌಲ್ಯದ ಚಿನ್ನ, ನಗದು ಜಪ್ತಿ

Sirsi police have arrested a 21-year-old आरोपी in a house theft case and recovered gold ornaments worth ₹1.30 lakh along with cash. The burglary took place in Kasturbanagar, Uttara Kannada district.
Sirsi police news Sirsi police news

Sirsi:ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ:1.30 ಲಕ್ಷ ರೂ. ಮೌಲ್ಯದ ಚಿನ್ನ, ನಗದು ಜಪ್ತಿ

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಶಿರಸಿ (sirsi) ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಓರ್ವ ಆರೋಪಿಯನ್ನು ಬಂಧಿಸಿ, ನಗದು ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

Sirsi| ಬಂಗಾರದ ಆಸೆಗೆ ಮದುವೆಗೆ ಸಿದ್ಧವಾಗಿದ್ದ ವೈದ್ಯನ ಕೊಂದ ಗೆಳೆಯ ಕೊನೆಗೂ ಲಾಕ್ !

Advertisement

ಶಿರಸಿಯ ಕಸ್ತೂರಬಾನಗರದ ಟೀಚರ್ಸ್ ಕಾಲೋನಿ ನಿವಾಸಿ  ಶಹತಾಜ್ ಕೊಂ ತಬ್ರೇಜ ಸಾಹೇಬ ಅವರ ಮನೆಗೆ ಏಪ್ರಿಲ್ 18ರ ರಾತ್ರಿ 7:30ರಿಂದ ಏಪ್ರಿಲ್ 19ರ ಬೆಳಿಗ್ಗೆ 11:00 ಗಂಟೆಯ ಅವಧಿಯಲ್ಲಿ ದುಷ್ಕರ್ಮಿಗಳು ಮನೆಯ ಮುಂಬಾಗಿಲು ಹಾಗೂ ಅಲಮಾರಿ ಬಾಗಿಲನ್ನು ಗಟ್ಟಿಯಾದ ವಸ್ತುವಿನಿಂದ ಮೀಟಿ ಒಳನುಗ್ಗಿದ್ದರು. ಅಲಮಾರಿಯಲ್ಲಿ ಇದ್ದ 1 ಲಕ್ಷ ರೂ. ನಗದು ಹಣ ಹಾಗೂ ಅಂದಾಜು 1.30 ಲಕ್ಷ ರೂ. ಮೌಲ್ಯದ 8 ಗ್ರಾಂ ತೂಕದ ಎರಡು ಬಂಗಾರದ ಉಂಗುರಗಳನ್ನು ಕಳವು ಮಾಡಿದ್ದರು. ಈ ಕುರಿತು ಶಿರಸಿ ಹೊಸ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Sirsi | ಕಸದ ವಿಚಾರದಲ್ಲಿ ಗಲಾಟೆ ಮಾಡಿ ಹತ್ಯೆ ಮಾಡಿದವರಿಗೆ ಜೀವಾವಧಿ ಶಿಕ್ಷೆ

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಮಾಹಿತಿ ಸಂಗ್ರಹಿಸಿ ಆರೋಪಿಯ ಜಾಡು ಹಿಡಿದು, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೆರೂರು ನಿವಾಸಿ, ಕೂಲಿ ಕಾರ್ಮಿಕ ಅಬ್ದುಲ್ ಖುದ್ದುಸ್ (21) ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತನಿಂದ ಕಳುವಾಗಿದ್ದ 1.30 ಲಕ್ಷ ರೂ. ಮೌಲ್ಯದ ಎರಡು ಚಿನ್ನದ ಉಂಗುರಗಳು (8 ಗ್ರಾಂ), 10,430 ರೂ. ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ್ದ ಮಚ್ಚು, ಸ್ಕ್ಯಾನರ್ ಮತ್ತು ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ. ಸದ್ಯ ಆರೋಪಿಯನ್ನು  ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

Sirsi | ಕಸದ ವಿಚಾರದಲ್ಲಿ ಗಲಾಟೆ ಮಾಡಿ ಹತ್ಯೆ ಮಾಡಿದವರಿಗೆ ಜೀವಾವಧಿ ಶಿಕ್ಷೆ

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ದೀಪನ್ ಎಮ್.ಎನ್, ಹೆಚ್ಚುವರಿ ಎಸ್.ಪಿ  ಕೃಷ್ಣಮೂರ್ತಿ ಜಿ., ಶಿರಸಿ ಉಪವಿಭಾಗದ ಡಿವೈಎಸ್‌ಪಿ  ಗೀತಾ ಪಾಟೀಲ್ ಹಾಗೂ ಸಿಪಿಐ  ಶಶಿಕಾಂತ ವರ್ಮಾ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪಿಎಸ್‌ಐ ಬಸವರಾಜ ಕನಶೆಟ್ಟಿ ನೇತೃತ್ವದ ತಂಡದಲ್ಲಿ ಎಎಸ್‌ಐ ಮಂಗಳಮೂರ್ತಿ ಶಿರಹಟ್ಟಿ ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳಾದ ಸಂತೋಷ ಆರ್.ಕೆ, ಸಂದೀಪ ನಿಂಬಾಯಿ, ರಾಕೇಶ ಎನ್.ಹೆಚ್, ಅರುಣ ಲಮಾಣಿ, ಮಂಜುನಾಥ ಕೆ., ಪ್ರಸಾದ ಎಮ್., ಮಲ್ಲಿಕಾರ್ಜುನ ಕೆ. ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಜೀಪ್ ಚಾಲಕರಾದ ಹನುಮಂತ ವಾಲಿಕರ್ ಹಾಗೂ ಕಾರವಾರದ ಟೆಕ್ನಿಕಲ್ ಸೆಲ್‌ನ ಉದಯ ಗುನಗಾ ಮತ್ತು ಬಬನ್ ಕದಂ ಅವರು ಆರೋಪಿಯನ್ನು ವಶಕ್ಕೆ ಪಡೆಯಲು ಸಹಕರಿಸಿದ್ದಾರೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement