ಬಸ್ ನಿಲ್ದಾಣದಲ್ಲಿ ಸಿಕ್ಕ ಚೀಲ ಬಿಚ್ಚಿ ನೋಡಿದ ಮಹಿಳೆಗೆ ಕಾದಿತ್ತು ಶಾಕ್!ಚೀಲದಲ್ಲಿ ಸಿಕ್ತು ನವಜಾತ ಗಂಡುಶಿಶು!

4602

ಕಾರವಾರ: ಬಸ್ ನಲ್ಲಿ ತೆರಳಲು ಬಸ್ ನಿಲ್ದಾಣಕ್ಕೆ ಬಂದಿದ್ದ ಮಹಿಳೆಯೋರ್ವಳಿಗೆ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದ ಚೀಲವನ್ನು ತೆರೆದಿದ್ದು ಆ ಚೀಲದಲ್ಲಿ ನವಜಾತ ಗಂಡು ಮಗು ದೊರೆತ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗೌಡಳ್ಳಿ ಸಮೀಪದ ಖಾನ್ ನಗರದ ಬಸ್ ತಂಗುದಾಣದಲ್ಲಿ ನಡೆದಿದೆ.
ತಾಲೂಕಿನ ಕೂಗಿಲಕುಳಿ ಗ್ರಾಮದ ಮಾದೇವಿ ಎಂಬುವರಿಗೆ ಈ ಮಗು ದೊರೆತಿದ್ದು ಈ ಮಗುವನ್ನು ಶಿರಸಿಯ ಸಹಾಯ ಟ್ರಸ್ಟ್ ಗೆ ಹಸ್ತಾಂತರಿಸಿದ್ದಾರೆ. ಟ್ರಸ್ಟ್ ಅಧ್ಯಕ್ಷ ಸತೀಶ ಶೆಟ್ಟಿ ಅನಾರೋಗ್ಯಕ್ಕೆ ತುತ್ತಾಗಿರುವ ಮಗುವನ್ನು ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಮಕ್ಕಳ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪತ್ತೆಯಾಗಿದ್ದು ಹೇಗೆ?

ಕೂಲಿ ಕೆಲಸಕ್ಕೆ ಪ್ರತಿ ದಿನ ಬಸ್ ನಲ್ಲಿ ಹೋಗುವಾಗ ತಂಗುದಾಣದಲ್ಲಿ ಇಂದು ಚೀಲ ಪತ್ತೆಯಾಗಿದೆ. ಯಾರೋ ಮರೆತು ಬಿಟ್ಟು ಹೋಗಿರಬೇಕು ಎಂದು ಆ ಚೀಲವನ್ನು ಮಾದೇವಿ ಸನಿಹದಲ್ಲೇ ಇರುವ ತನ್ನ ಮನೆಗೆ ತಂದು ನೋಡಿದ್ದಾಳೆ. ಈ ವೇಳೆ ಚೀಲ ಬಿಚ್ಚುತಿದ್ದಂತೆ ಮಗು ಅಳುವುದು ಕೇಳಿಸಿದ್ದು ಭಯ ಗೊಂಡ ಮಹಿಳೆ ಸ್ಥಳೀಯರಿಗೆ ಮಾಹಿತಿ ನೀಡಿ ನಂತರ ಪೊಲೀಸರಿಗೂ ಮಾಹಿತಿ ನೀಡಲಾಗಿದ್ದು ರಕ್ಷಣೆ ಮಾಡಲಾಗಿದೆ.

ಅವಧಿಪೂರ್ವ ಜನಿಸಿದ ಶಿಶು ಇದಾಗಿದ್ದು 1.6 ಕೆಜಿ ತೂಕ ಹೊಂದಿದೆ. ಜನಿಸಿ ನಾಲ್ಕು ದಿನ ಆಗಿರುವ ಸಾಧ್ಯತೆಗಳಿದ್ದು ಮಗುವಿನ ಎಡಗೈ ಮುಂಭಾಗದ ಮೂಳೆ ಬೆಳವಣಿಗೆ ಕುಂಟಿತವಾಗಿದ್ದು, ಆರು ಬೆರಳನ್ನು ಹೊಂದಿದೆ. ಗಾಳಿ, ಮಳೆಯ ವಾತಾವರಣದಲ್ಲಿದ್ದ ಕಾರಣ ಮಗುವಿನ ಆರೋಗ್ಯ ಹದಗೆಟ್ಟಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಸಂಬಂಧ ಪ್ರಕರಣ ಸಹ ದಾಖಲಾಗಿದ್ದು ಮಗುವಿನ ಪೋಷಕರ ಪತ್ತೆಗೆ ಪ್ರಯತ್ನ ಸಾಗುತ್ತಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!