ಕಾರವಾರ:-ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆಯ ಸಂಪರ್ಕದಲ್ಲಿದ್ದ ಆರೋಪದ ಮೇಲೆ ಉತ್ತರಕನ್ನಡ ಜಿಲ್ಲೆಯ ಶಿರಸಿಯ ವ್ಯಕ್ತಿಯೊಬ್ಬನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಬಂಧಿಸಿದ್ದಾರೆ.

35 ವರ್ಷದ ಸೈಯದ್ ಇದ್ರಿಸ್ ನಬಿ ಸಾಬ್ ಬಂಧಿತ ಆರೋಪಿಯಾಗಿದ್ದಾನೆ. ಲಷ್ಕರ್ ಎ ತೊಯ್ಬಾದ ಸಂಘಟನೆಯಲ್ಲಿ ಗುರುತಿಸಿಕೊಂಡು ಪಶ್ಚಿಮಬಂಗಾಳದಲ್ಲಿ ಬಂಧಿಯಾಗಿದ್ದ ತಾನಿಯಾ ಪರ್ವೀನ್ ಎನ್ನುವವನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಈತನನ್ನು ಬಂಧಿಸಲಾಗಿದೆ. ಮೊಬೈಲ್ ಫೋನ್ ಆಧಾರದ ಮೇಲೆ ಈತನನ್ನ ಬಂಧಿಸಲಾಗಿದೆ.
ಎನ್ಐಎ ಪ್ರಾಥಮಿಕ ತನಿಖೆಯ ಪ್ರಕಾರ ಈತ ಐಎಸ್ಐ ಉಗ್ರ ಸಂಘಟನೆಯೊಂದಿಗೂ ಸಂಪರ್ಕ ಹೊಂದಿದ್ದ ಎನ್ನಲಾಗಿದ್ದು, ಬಂದಿಸಿ ಕಲ್ಕತ್ತಾಗೆ ಕರೆದೊಯ್ದಿದ್ದಾರೆ.