ಕಾರವಾರ:- ಶಿವಮೊಗ್ಗ ಜಿಲ್ಲೆಯ ಸೊರಬಾ ತಾಲೂಕಿನಿಂದ ಗಾಂಜಾ ಸಾಗಿಸುತಿದ್ದ ಇಬ್ಬರನ್ನು ಶಿರಸಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ಮಾರಾಟ ಮಾಡಲು ಒಯ್ಯುತಿದ್ದ ಒಟ್ಟು ಒಂದು ಕೆಜಿ 910 ಗ್ರಾಮ್ ತೂಕದ ₹25 ಸಾವಿರ ಮೌಲ್ಯದ ಗಾಂಜಾವನ್ನು ಭಾನುವಾರ ವಶಪಡಿಸಿಕೊಂಡಿದ್ದಾರೆ.
ಬಂಧಿತರು ಸೊರಬಾ ತಾಲೂಕಿನ ದೇವನಹಳ್ಳಿ ಗ್ರಾಮದ ಮಂಜುನಾಥ್ ನಾಯ್ಕ ಹಾಗೂ ವೀರಭದ್ರಪ್ಪ ಎಂದು ಗುರುತಿಸಲಾಗಿದೆ.
ಶಿರಸಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀರಾಮ ಕಾಲೋನಿಯ ರಸ್ತೆಯಲ್ಲಿ ಬೈಕ್ ನಲ್ಲಿ ಮಾರಾಟಕ್ಕೆ ಹೊರಟಿದ್ದಾಗ ಕಚಿತ ಮಾಹಿತಿ ಪಡೆಸ ಶಿರಸಿ ಉಪ ವಿಭಾಗದ ಡಿ.ವೈ.ಎಸ್.ಪಿ ರವಿ ಡಿ ನಾಯಕ ರವರ ಮಾರ್ಗದರ್ಶನದಲ್ಲಿ ಸಿಪಿಐ ರಾಮಚಂದ್ರ ನಾಯಕ, ಪಿ.ಎಸ್.ಐ ರಾಜಕುಮಾರ್ ಎಸ್ ಉಕ್ಕಲಿ ನೇತ್ರತ್ವದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದ್ದು ಆರೋಪಿ ಮಂಜುನಾಥ್ ಎಂಬುವವನ ವಿರುದ್ಧ ಈ ಹಿಂದೆ ಸುಲಿಗೆ ಪ್ರಕರಣವು ಬನವಾಸಿ ಠಾಣೆಯಲ್ಲಿ ದಾಖಲಾಗಿತ್ತು.