BREAKING NEWS
Search

ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ.

635

ಕಾರವಾರ:- ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾದ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯೋರ್ವಳು ತಾನು ವರ್ಷ ಪೂರ್ತಿ ಓದಿರುವುದು ವ್ಯರ್ಥವಾಯಿತು ಎಂಬುದನ್ನೇ ಮನಸ್ಸಿಗೆ ಹಚ್ಚಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರಸಿ ತಾಲೂಕಿನ ಸಹಸ್ರಳ್ಳಿಯಲ್ಲಿ ನಡೆದಿದೆ.

ತಾಲೂಕಿನ ಯಡಳ್ಳಿ ಸಮೀಪದ ಸಹಸ್ರಳ್ಳಿಯ ಧನ್ಯಾ ಆಚಾರಿ (೧೮) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಶಿರಸಿ ಮಾರಿಕಾಂಬಾ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಷಯ ಓದುತ್ತಿದ್ದವಳು. ಕಾಲೇಜಿಗೆ ಪ್ರಥಮ ರ್ಯಾಂಕ್ ಬರಬೇಕು ಎಂಬ ಆಶಯವನ್ನು ಹೊಂದಿದ್ದಳು. ಆದರೆ ಒಮ್ಮೆಲೇ ಕೊರೊನಾ ಕಾರಣದಿಂದ ಪರೀಕ್ಷೆ ರದ್ದಾಗಿ, ಪ್ರಥಮ ಪಿಯುಸಿ ಆಧಾರದ ಮೇಲೆ ಅಂಕ ನೀಡುವ ಘೋಷಣೆಯಿಂದ ಚಿಂತೆಯಲ್ಲಿದ್ದಳು.

ಪರೀಕ್ಷೆ ರದ್ದಾದ ಕಾರಣ ವರ್ಷಪೂರ್ತಿ ಓದಿದ್ದು ವ್ಯರ್ಥವಾಯಿತು ಎಂದು ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿ ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಶಿರಸಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!