ಚುನಾವಣೆ ನಿಂತವರಲ್ಲಿ ಒಳ್ಳೆಯವರು ಕಾಣದಿದ್ರೆ ನೋಟಾಗೆ ಒತ್ತಿ|ಕಾಗೇರಿ

105

ಕಲಬುರಗಿ: ಚುನಾವಣೆಗೆ ನಿಂತವರಲ್ಲಿ ಯಾರೂ ಒಳ್ಳೆಯವರು ಕಾಣದಿದ್ದರೆ ನೋಟಾಗೆ ಒತ್ತಿ ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ (ವಿಶ್ವೇಶ್ವರ ಹೆಗಡೆ ಕಾಗೇರಿ) ಕರೆ ನೀಡಿದರು.

ಕಲಬುರ್ಗಿ ನಗರದ ಡಾ.ಎಸ್.ಎಂ ಪಂಡಿತ್ ರಂಗಮಂದಿರದಲ್ಲಿ ಕಲಬುರಗಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಚುನಾವಣೆ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ’ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ್ದಾರೆ. ಈ ವೇಳೆ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ `ನನ್ನ ಮತ ಮಾರಾಟಕ್ಕಿಲ್ಲ’ ಎಂಬ ಆತ್ಮಸಾಕ್ಷಿಯ ಅಭಿಯಾನ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ. 

ಚುನಾವಣೆಯಲ್ಲಿಂದು ಹಣ, ತೋಳ್ಬಲ ಹಾಗೂ ಜಾತಿ ಬಲ ಪ್ರಮುಖ ಪಾತ್ರ ವಹಿಸುತ್ತಿವೆ. ಸಂವಿಧಾನ ಬದ್ಧವಾಗಿ ಸಿಕ್ಕಿರುವ ಮತದಾನದ ಹಕ್ಕನ್ನು ಮತದಾರರು ಅರಿಯಬೇಕು. ಮತ ಮಾರಾಟ ಮಾಡದೇ ಸ್ಫರ್ಧಾಳುಗಳಲ್ಲಿ ಉತ್ತಮರನ್ನು ಆಯ್ಕೆ ಮಾಡಿ. ಒಂದು ವೇಳೆ ಚುನಾವಣೆ ನಿಂತವರಲ್ಲಿ ಯಾರೂ ಒಳ್ಳೆಯವರು ಕಾಣದಿದ್ದರೆ ನೋಟಾಗೆ ಒತ್ತಿ ಎಂದು ಹೇಳಿದ್ದಾರೆ.

ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾರಂಗ(ಮಾಧ್ಯಮ) ಹೀಗೆ ಎಲ್ಲ ಕ್ಷೇತ್ರಗಳ ಮೌಲ್ಯಗಳು ಕುಸಿಯುತ್ತಿವೆ. ಭ್ರಷ್ಟಾಚಾರ ವ್ಯಾಪಿಸಿದೆ. ಜನಪ್ರತಿನಿಧಿಗಳು ಜನರಿಗೆ ನೀಡಿದ ಆಶ್ವಾಸನೆ ನೀಡುವಲ್ಲಿ ವಿಫಲರಾಗುತ್ತಿದ್ದಾರೆ. ಕಾರ್ಯಾಂಗದಲ್ಲಿ ಮಾನವೀಯತೆ ಮರೆತ ಪರಿಣಾಮ ಜನರು ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯಲು ಕಚೇರಿಯಿಂದ ಕಚೇರಿಗೆ ಅಲೆದಾಡಿ ರೋಸಿ ಹೋಗಿದ್ದಾರೆ. ನ್ಯಾಯಾಲಯಗಳು (ನ್ಯಾಯಾಲಯ) ನ್ಯಾಯ ನೀಡುವ ತೀರ್ಪು ನೀಡುತ್ತಿವೆ. ಇನ್ನು ಮಾಧ್ಯಮ ಕ್ಷೇತ್ರವೂ ಸಾಮಾಜಿಕ ಹೊಣೆಗಾರಿಕೆ ಮರೆತಿದ್ದು, ಇಲ್ಲಿಯೂ ಭ್ರಷ್ಟಾಚಾರ ನಡೆದಿದೆ. ಶಿಕ್ಷಣ ಸಂಸ್ಥೆಗಳು ರಾಷ್ಟ್ರೀಯತೆಯನ್ನು ಮರೆತಿವೆ ಎಂದರು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!