GPS ಟ್ರ್ಯಾಕರ್ ಬಳಸಿ ಉದ್ಯಮಿಯಿಂದ ₹50ಲಕ್ಷ ದರೋಡೆ ಮಾಡಿದ್ದ ಕಳ್ಳರ ಬಂಧನ!

80

ಕಾರವಾರ :-ಅ.19 ರಂದು ನಡೆದಿದ್ದ ಉದ್ಯಮಿಯೊಬ್ಬರಿಗೆ ಪಿಸ್ತೂಲ್ ಹಾಗೂ ಚಾಕು ತೋರಿಸಿ ₹ 50ಲಕ್ಷ ಹಣ ದೋಚಿದ್ದ ಪ್ರಕರಣವನ್ನು ಶಿರಸಿ ಠಾಣೆ ಪೊಲೀಸರು ಬೇಧಿಸಿದ್ದು 9 ಜನ ದರೋಡೆಕೋರರನ್ನು ಇಂದು ಬಂಧಿಸಿ ಬಂಧಿತರಿಂದ ₹13.82 ಲಕ್ಷ, ಕೃತ್ಯಕ್ಕೆ ಉಪಯೋಗಿಸಿದ್ದ ಎರಡು ಕಾರು, 12 ಮೊಬೈಲ್ ಮತ್ತು ಜಿ.ಪಿ.ಎಸ್. ಟ್ರ್ಯಾಕರ್ ವಶಕ್ಕೆ (GPS tracker) ಪಡೆಯಲಾಗಿದೆ.
ಸಿದ್ದಾಪುರ ತಾಲ್ಲೂಕು (siddapura) ನೆಜ್ಜೂರು ಗ್ರಾಮದ ಜಾವೇದ್ ಖಾನ್ ಎಂಬುವವರು ಇಬ್ಬರು ಸಂಬಂಧಿಕರೊಂದಿಗೆ ಬೆಳಗಾವಿಯಿಂದ ವಾಪಸ್ಸಾಗುವ ವೇಳೆ ದರೋಡೆಕೋರರು ಅಡ್ಡಗಟ್ಟಿ ಹಣ ದೋಚಿದ್ದರು.

ಆರೋಪಿತರಾದ ಶಿವಮೊಗ್ಗ ಜಿಲ್ಲೆ ಸಾಗರದ ಶ್ರೀಧರ (sagar)ನಗರದ ಆಸಿಫ್ ಅಬ್ದುಲ್ ಸತ್ತಾರ (29), ಅಬ್ದುಲ್ ಅಬ್ದುಲ್ ಸತ್ತಾರ (32), ಮನ್ಸೂರ್ ಅಲಿಯಾಸ್ ಮಹಮದ್ ಜಾಫರ್ ಖಾನ್ (31), (siddapura)ಸಿದ್ದಾಪುರ ತಾಲ್ಲೂಕು ನೆಜ್ಜೂರಿನ ಅಜಿಮುಲ್ಲಾ ಅನ್ಸರ್ ಸಾಬ್ (29), ಭಟ್ಕಳ ಬದ್ರಿಯಾ ಕಾಲೊನಿಯ ಅಬ್ದುಲ್ ರೆಹಮಾನ್ ವಟರಾಗ (30), ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಮೇಲಿನ‌ ಪೇಟೆಯ ರಿಯಾಜ್ ಫಯಾಜ್ (32), ಕೊಪ್ಪ ತಾಲ್ಲೂಕು ನೇತಾಜಿ ನಗರದವರಾದ ವಿಶ್ವನಾಥ ವಾಸು ಶೆಟ್ಟಿ (41), ಮನೋಹರ ಆನಂದ ಶೆಟ್ಟಿ (36), ಶಿವಮೊಗ್ಗ ಜಿಲ್ಲೆ (shivamogga) ತೀರ್ಥಳ್ಳಿ ತಾಲ್ಲೂಕಿನ ಬಾಳೆಬೈಲ್ ನ ಇಕ್ಬಾಲ್ ಅಬ್ದುಲ್ ಕೆ. (40) ಬಂಧಿತರಾದವರಾಗುದ್ದಾರೆ. ಪ್ರಕರಣದಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದು ಅವರ ಹುಡುಕಾಟ ನಡೆಸಲಾಗುತ್ತಿದೆ.

https://kannadavani.news/banavasi-the-car-was-blocked-and-the-money-was-stolen/

ಉದ್ಯಮಿ ಜಾವೇದ್ ಹಣಕಾಸು ವ್ಯವಹಾರ ಅರಿತಿದ್ದ ಆಸೀಫ್ ಆಗಾಗ ಅವರ ಮನೆಗೆ ಭೇಟಿ ನೀಡುತ್ತಿದ್ದ. ಭೂಮಿ ಖರೀದಿಗೆ ಬೆಳಗಾವಿಗೆ ತೆರಳುವುದನ್ನು ಅರಿತಿದ್ದರಿಂದ ವಾಹನಕ್ಕೆ ಜಿ.ಪಿ.ಎಸ್. ಟ್ರ್ಯಾಕರ್ ಅಳವಡಿಸಿದ್ದ. ನಿರಂತರವಾಗಿ ಟ್ರ್ಯಾಕರ್ ಮೂಲಕ ಚಲನವಲನ ಗಮನಿಸುತ್ತಿದ್ದ ಈತ ಸಹಚರರ ಜೊತೆ ಸೇರಿ ನಿರ್ಜನ ಪ್ರದೇಶದಲ್ಲಿ ಅಡ್ಡಗಟ್ಟಿ ಕೃತ್ಯ ಎಸಗಿದ್ದ.ಎಂದು ತನಿಖೆಯ ನೇತೃತ್ವ ವಹಿಸಿದ್ದ ಡಿಎಸ್ಪಿ ರವಿ ನಾಯ್ಕ ಮಾಹಿತಿ ನೀಡಿದ್ದಾರೆ.

ಪ್ರಕರಣ ಬೇಧಿಸುವಲ್ಲಿ ಸಿಪಿಐ ರಾಮಚಂದ್ರ ನಾಯಕ, ಎಸ್ಐಗಳಾದ ಹನುಮಂತ ಬಿರಾದಾರ, ಭೀಮಾಶಂಕರ ಸಿನ್ನೂರು, ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.

ಇದನ್ನೂ ಓದಿ:- ಬನವಾಸಿಯಲ್ಲಿ ಉದ್ಯಮಿಗೆ ಪಿಸ್ತೋಲ್ ತೋರಿಸಿ ಹಲ್ಲೆಮಾಡಿ ದರೋಡೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!