Thumkur |5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ; ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು.

Thumkur news Thumkur news
ತುಮಕೂರು: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ; ಯುವಕ ಪೊಲೀಸರ ವಶಕ್ಕೆ ನೀಡಿದ ಗ್ರಾಮಸ್ತರು
Thumkur news
ತುಮಕೂರು: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ; ಯುವಕ ಪೊಲೀಸರ ವಶಕ್ಕೆ ನೀಡಿದ ಗ್ರಾಮಸ್ತರು

ತುಮಕೂರು: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ತುಮಕೂರು ತಾಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ.

ಸಾಹಿಲ್ ಎಂಬ ಯುವಕ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬಾಲಕಿ ಆರೋಪಿಗೆ ಸಂಬಂಧಿಯಾಗಿದ್ದಾಳೆ ಎಂದು ತಿಳಿದುಬಂದಿದೆ.

ತುಮಕೂರು: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ; ಯುವಕ ಪೊಲೀಸರ ವಶಕ್ಕೆ
ತುಮಕೂರು: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ; ಯುವಕ ಪೊಲೀಸರ ವಶಕ್ಕೆ

ಘಟನೆ ಗಮನಕ್ಕೆ ಬರುತ್ತಿದ್ದಂತೆ ಸ್ಥಳೀಯರು ಆರೋಪಿಯನ್ನು ಹಿಡಿದಿದ್ದಾರೆ. ಈ ವೇಳೆ ಸ್ಥಳೀಯ ಮಹಿಳೆಯರು ಹಾಗೂ ಗ್ರಾಮಸ್ಥರು ಆರೋಪಿಗೆ ಥಳಿಸಿದ್ದು, ಕೆಲ ಸಮಯ ಯುವಕನನ್ನು ಮರಕ್ಕೆ ಕಟ್ಟಿ ಚಪ್ಪಲಿಯಿಂದ ಹೊಡೆದಿರುವುದಾಗಿ ತಿಳಿದುಬಂದಿದೆ.ಇದನ್ನೂ ಓದಿ:-School ಬಾಗಿಲು ಸಿಲುಕಿ ಬಾಲಕಿಯ ಬೆರಳು ಕಟ್ |ಬೆರಳನ್ನ ಕಸದ ಬುಟ್ಟಿಗೆ ಎಸದ ಶಿಕ್ಷರು

Advertisement

ಬಳಿಕ ಘಟನೆ ಕುರಿತು ತುಮಕೂರು(thumkur) ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು, ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆದಿರುವ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಘಟನೆಯಲ್ಲಿ ಬಾಲಕಿಗೆ ಚಿಕಿತ್ಸೆ ಅಗತ್ಯವಾಗಿದ್ದು, ಆಕೆಯನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆ ಶುಕ್ರವಾರ ಸಂಜೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement