ಕಾರವಾರ /ಶಿವಮೊಗ್ಗ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ನೂರು ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದೆ.
ತಾಲೂಕುವಾರು ವಿವರ ಈ ಕೆಳಗಿನಂತಿದೆ:-

ಸೀಬರ್ಡ ನೌಕಾನೆಲೆ ,ಮೆಡಿಕಲ್ ಕಾಲೇಜಿನಲ್ಲಿ ಕರೋನಾ ಏರಿಕೆ
ಉತ್ತರ ಕನ್ನಡ ಜಿಲ್ಲೆಯ ಕಾರವಾರ ದಲ್ಲಿ ಇದೀಗ ಸಿರ್ಬಡ್ ನೌಕಾನೆಲೆ, ಮೆಡಿಕಲ್ ಕಾಲೇಜಿನಲ್ಲಿ ಸೋಂಕು ಹೆಚ್ಚಾಗುತಿದ್ದು ಆತಂಕಕ್ಕೆ ಕಾರಣವಾಗಿದೆ.
ಕ್ರಿಮ್ಸ್ ಮೆಡಿಕಲ್ ಕಾಲೇಜಿನ ವೈದ್ಯರು ವಿದ್ಯಾರ್ಥಿಗಳು ಸೇರಿ 29ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡರೆ, ಸೀಬರ್ಡ್ ನೌಕಾನೆಲೆಯಲ್ಲಿ ಉತ್ತರ ಭಾರತ ದಿಂದ ಬಂದ ನೌಕರರಿಂದ ಪಾಸಿಟಿವ್ ಸಂಖ್ಯೆ ಹೆಚ್ಚಳವಾಗಿದ್ದು ಸಿರ್ಬಡ್ ನೌಕಾನೆಲೆಯಲ್ಲಿ ಉತ್ತರ ಭಾರತದ ನೌಕರರಲ್ಲಿ 30 ನೌಕರಿಗೆ ಪಾಸಿಟಿವ್ ಕಾಣಿಸಿಕೊಂಡಿದೆ.
ಇನ್ನು ಕಠಿಣ ನಿಯಮ ಪಾಲನೆಯಾಗದಿದ್ದರಿಂದ ಇದೀಗ ಮತ್ತಷ್ಟು ಏರಿಕೆ ಕಾಣುವ ಆತಂಕ ತಂದೊಡ್ಡಿದೆ. ಹೀಗಾಗಿ ಐದು ಸಾವಿರ ಜನರಿಗೆ ಕೋವಿಡ್ ಟೆಸ್ಟ್ ಮಾಡಿಸುವ ಮತ್ತು ಕ್ಬಾರಂಟೈನ್ ಗೆ ಆರೋಗ್ಯ ಇಲಾಖೆ ಸಿದ್ದತೆ ಮಾಡಿಕೊಂಡಿರುವುದಾಗಿ ಜಿಲ್ಲಾ ಆರೋಗ್ಯಾಧಿಕಾರಿ ಶರದ್ ನಾಯಕ ರವರು ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ 112 ಜನರಿಗೆ ಪಾಸಿಟಿವ್ !
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 112 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು ತಾಲೂಕುವಾರು ವಿವರ ಈ ಕೆಳಗಿನಂತಿದೆ.
