BREAKING NEWS
Search

ಜಿಲ್ಲೆಯ ಪ್ರಾರಂಭವಾದ ನಾಮಪತ್ರ ಸಲ್ಲಿಕೆ ಕಾರ್ಯ |ಯಾರು ಯಾವ ಕ್ಷೇತ್ರದಿಂದ ಎಂದು ನಾಮಪತ್ರ ಸಲ್ಲಿಕೆ ವಿವರ ನೋಡಿ.

84

ಕಾರವಾರ::- ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪಕ್ಷೇತರರಾಗಿ ಅಭಿರಾಮ್ ಹೆಗಡೆ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇವರ ನಂತರ ಭಟ್ಕಳ ಕ್ಷೇತ್ರದಿಂದ
ಕರ್ನಾಟಕ ರಾಷ್ಟ್ರ ಪಕ್ಷದಿಂದ ಶಂಕರ ಗಣಪಯ್ಯ ಗೌಡ ನಾಮಪತ್ರ ಸಲ್ಲಿಕೆ ಮಾಡಿದರು.

ಏಪ್ರಿಲ್ 17,18 ಯಾರೆಲ್ಲಾ ನಾಮಪತ್ರ ಸಲ್ಲಿಕೆ ವಿವರ ಈ ಕೆಳಗಿನಂತಿದೆ.

ಇನ್ನು ವಿಧಾನಸಭಾ ಸ್ಪೀಕರ್ ಆಗಿರುವ ಶಿರಸಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ , ಜೆಡಿಎಸ್ ಅಭ್ಯರ್ಥಿ ಉಪೇಂದ್ರ ಪೈ ಏ.18 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಮಾಜಿ ಶಾಸಕ ವಿಎಸ್ ಪಾಟೀಲ್ , ಹಳಿಯಾಳ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಮಾಜಿ ಶಾಸಕ ಸುನಿಲ್ ಹೆಗಡೆ, ಕುಮಟಾ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕ ದಿನಕರ್ ಶಟ್ಟಿ ,ಶಿರಸಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಏ.17 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಇನ್ನು ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ,ಹಳಿಯಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ವಿ ದೇಶಪಾಂಡೆ, ಜೆಡಿಎಸ್ ಅಭ್ಯರ್ಥಿ ಎಸ್.ಎಲ್ ಘೋಟ್ನೇಕರ್ ,ಕುಮಟಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸೂರಜ್ ಸೋನಿ, ಕಾರವಾರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ರವರ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿಯಾಗಬೇಕಿದೆ.

election 2023 nomination filling assembly election
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!