ಕರವೇ ಜಿಲ್ಲಾಧ್ಯಕ್ಷ ಭಾಸ್ಕರ್ ಪಟಗಾರ್ ಕಾಂಗ್ರೆಸ್ ಗೆ ಸೇರ್ಪಡೆ ಕಾಂಗ್ರೆಸ್ ವಲಯದಲ್ಲಿ ಹೊಸ ಚಿಗುರು

1496

ಬೆಂಗಳೂರು.:- ಉತ್ತರ ಕನ್ನಡ ಜಿಲ್ಲೆಯ ಕರವೇ ಜಿಲ್ಲಾಧ್ಯಕ್ಷ ಭಾಸ್ಕರ್ ಪಟಗಾರ್ ರವರು ಇಂದು ಬೆಂಗಳೂರಿನ ಪ್ರದೇಶ ಕಾಂಗ್ರೆಸ್ ಪಾರ್ಟಿ ಕೇಂದ್ರ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಗೆ ಸೇರ್ಪಡೆ ಗೊಂಡಿದ್ದಾರೆ. ಈ ಮುಲಕ ಉತ್ತರ ಕನ್ನಡ ಜಿಲ್ಲೆ ಹಾಗೂ ಕುಮಟಾ ಭಾಗದಲ್ಲಿ ಕಾಂಗ್ರೆಸ್ ಗೆ ಮತ್ತಷ್ಟು ಭಲ ಬಂದಂತಾಗಿದೆ.

ಕರವೇ ಜಿಲ್ಲಾಧ್ಯಕ್ಷರಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ತಮ್ಮದೇ ಆದ ಹೆಸರನ್ನು ಮಾಡುವ ಮೂಲಕ ಕನ್ನಡ ಸೇವೆಯನ್ನು ಮಾಡುತ್ತಿರುವ ಭಾಸ್ಕರ್ ಪಟಗಾರ್ ರವರು ಕಾಂಗ್ರೆಸ್ ಸೆರ್ಪಡೆ ಜಿಲ್ಲೆಯ ಒಕ್ಕಲೀಗ ಜನಾಂಗಕ್ಕೂ ಉತ್ತಮ ನಾಯಕ ಸಿಕ್ಕಂತಾಗಿದ್ದು , ಇಂದು ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಅಧಿಕೃತ ವಾಗಿ ಕಾಂಗ್ರೆಸ್ ದ್ವಜ ಹಿಡಿದು ಸೇರ್ಪಡೆಗೊಂಡರು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ, ,ನಿವೇದಿತ್ ಆಳ್ವ,ಪ್ರಶಾಂತ್ ದೇಶಪಾಂಡೆ ಸೇರಿದಂತೆ ಹಲವು ಜಿಲ್ಲೆಯ ಮುಖಂಡರು ಭಾಗಿಯಾಗಿ ಸಾಕ್ಷಿಯಾದರು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!