ಮೇ. 22 ರಿಂದ ಮೇ.24 ರವರೆಗೆ ಉತ್ತರ ಕನ್ನಡ ಜಿಲ್ಲೆ ಸಂಪೂರ್ಣ ಲಾಕ್‌ಡೌನ್.

4706

ಕಾರವಾರ :- ಕರೋನಾ ಪ್ರಕರಣ ನಿರಂತರವಾಗಿ ಅಧಿಕವಾಗುತ್ತಿರುವ ಹಿನ್ನಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಮೇರೆಗೆ ವಾರಾಂತ್ಯ ಅಂದರೆ ಮೇ 22 ರ ಬೆಳಿಗ್ಗೆ 6.೦೦ ಗಂಟೆಯಿಂದ ಮೇ 24 ರ ಬೆಳಿಗ್ಗೆ 6 ೦೦ ಗಂಟೆಯವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಕಠಿಣ ಲಾಕ್‌ಡೌನ್ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ ಎಂ. ಪಿ. ಅವರು ಆದೇಶ ಹೊರಡಿಸಿದ್ದಾರೆ.

ನಾಳೆಯಿಂದ ಉತ್ತರ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳು ಸಂಪೂರ್ಣ ಬಂದ್- ಶಿವರಾಮ್ ಹೆಬ್ಬಾರ್ .

ಉತ್ತರಕನ್ನಡ ಜಿಲ್ಲೆಯಲ್ಲಿ ಕರೋನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನಲೆಯಲ್ಲಿ
ನಾಳೆ ಬೆಳಿಗ್ಗೆ 10 ಗಂಟೆಯಿಂದ ನಾಲ್ಕು ತಾಲೂಕುಗಳು ಲಾಕ್ ಡೌನ್ ಮಾಡಲು ಸೂಚನೆ ನೀಡಲಾಗಿದೆ. ಸಿದ್ದಾಪುರ, ಶಿರಸಿ, ಯಲ್ಲಾಪುರ ಮತ್ತು ಮುಂಡಗೋಡು ಪಟ್ಟಣಗಳಲ್ಲಿ ಅತೀ ಹೆಚ್ವು ಸೋಂಕು ಪತ್ತೆಯಾಗುತಿದ್ದು ಈ ತಾಲೂಕುಗಳನ್ನು ಕಂಟೈಮ್ಮೆಂಟ್ ವಲಯವಾಗಿ ಘೋಷಣೆ ಮಾಡಲಾಗಿದ್ದು ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಉಳಿದ ತಾಲೂಕುಗಳಲ್ಲಿ ಮೇ 22ರ ಬೆಳಿಗ್ಗೆ ಆರು ಗಂಟೆಯಿಂದ ಲಾಕ್ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇದಲ್ಲದೇ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಆಧರಿಸಿ ಲಾಕ್ ಡೌನ್ ಮುಂದುವರೆಸುವ ಕುರಿತು ನಿರ್ಣಯ ತೆಗೆದುಕೊಳ್ಳಲಾಗುತ್ತದೆ.ಸಾರ್ವಜನಿಕರು ಕರೋನಾ ನಿಯಂತ್ರಣಕ್ಕೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!