ಉತ್ತರ ಕನ್ನಡ ಬಿಜೆಪಿ,ಕಾಂಗ್ರೆಸ್ ಅಭ್ಯರ್ಥಿಗಳು ಕೋಟಿ ವೀರರು! ಭೀಮಣ್ಣ,ಉಳ್ವೇಕರ್ ಆಸ್ತಿ ಮೌಲ್ಯವೆಷ್ಟು? ವಿವರ ನೋಡಿ.

1658

ಕಾರವಾರ :- ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷ ದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳಲ್ಲೆ ಕೋಟ್ಯಂತರ ರೂ. ಆಸ್ತಿ‌ ಹೊಂದಿದ್ದಾರೆ.

ಇಂದು ನಾಮಪತ್ರ ಸಲ್ಲಿಸಿದ ಅವರು ಸ್ವ ಘೋಷಣೆ ಮಾಡಿಕೊಂಡಿದ್ದು ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಅವರು 65.48 ಕೋಟಿ ರೂ. ಆಸ್ತಿ ಹೊಂದಿದ್ದಾರೆ. ಅದರಲ್ಲಿ 18.49 ಕೋಟಿ ರೂ ಚರಾಸ್ತಿ ಮತ್ತು 47 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದಾರೆ.

ಇದರ ಜೊತೆ 49.72 ಕೋಟಿ ರೂ. ಸಾಲ ಇರುವುದಾಗಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ.

ಇನ್ನು ಬಿಜೆಪಿ ಆಭ್ಯರ್ಥಿ ಗಣಪತಿ ಉಳ್ವೇಕರ ರವರು 3.15 ಕೋಟಿ ರೂ. ಆಸ್ತಿ ಹೊಂದಿದ್ದಾರೆ. ಅದರಲ್ಲಿ 1.98 ಕೋಟಿ ರೂ. ಚರಾಸ್ತಿ ಮತ್ತು 1.17 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದಾರೆ. 13.15 ಲಕ್ಷ ರೂ.‌ ಸಾಲ ಹೊಂದಿರುವುದಾಗಿ ಚುನಾವಣೆ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!