ಕಾರವಾರ :-ಬಿಜೆಪಿ ಸಂಸದರು, ಶಾಸಕರಿಂದಲೇ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಗಂಗೊಳ್ಳಿಯಲ್ಲಿ ನಡೆದಿದೆ.ಗಂಗೊಳ್ಳಿಯಲ್ಲಿ ನಿನ್ನೆ ಸಂಜೆ ಸಂಸದ ಅನಂತ ಕುಮಾರ್ ಹೆಗಡೆ, ಶಾಸಕ ದಿನಕರ ಶೆಟ್ಟಿ ರವರು 3.50ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆಯ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು .ಇವರೊಂದಿಗೆ ಬಿಜೆಪಿಯ ಜಿಲ್ಲಾಧ್ಯಕ್ಷ ವೆಂಕಟೇಶ್ ನಾಯ್ಕ್ , ಜಿಲ್ಲಾ ವಕ್ತಾರ ನಾಗರಾಜ ನಾಯ್ಕ್, ಮುಖಂಡರಾದ ನಾಗರಾಜ ನಾಯ್ಕ್ ತೊರಕೆ, ಹೇಮಂತ್ ಕುಮಾರ್ ಗಾಂವ್ಕರ್ ಮತ್ತಿತರರು ಭಾಗಿಯಾಗಿದ್ದರು.


ಆದರೇ ಯಾರೂ ಕೂಡ ಮಾಸ್ಕ ಧರಿಸದೇ ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಬೇಕಾಬಿಟ್ಟಿಯಾಗಿ ಗುಂಪುಗೂಡಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಇನ್ನು ಜನಪ್ರತಿನಿಧಿಗಳಿಂದಲೇ ನಿಯಮ ಉಲ್ಲಂಘನೆ ಆಗಿದ್ದರೂ ರಾಜ್ಯದಲ್ಲಿ ಜನಪ್ರತಿನಿಧಿಗಳಿಗೊಂದು ಕಾನೂನು, ಜನರಿಗೊಂದು ಕಾನೂನು ಎಂಬುವಂತಾಗಿದ್ದು ಜಿಲ್ಲಾಧಿಕಾರಿಗೆ ಈ ಬಗ್ಗೆ ಯಾವುದೇ ಮಾಹಿತಿ ತಿಳಿದಿಲ್ಲ. ಇನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪೆನ್ನೇಕರ್
ರವರು ವಿಡಿಯೋ ಪರಿಶೀಲಿಸಿ ಪ್ರಕರಣ ದಾಖಲಿಸುತ್ತೇವೆ,ಜನಪ್ರತಿನಿಧಿಗಳಿಂದ ಕೋವಿಡ್ ನಿಯಮ ಉಲ್ಲಂಘನೆ ಬಗ್ಗೆ ಮಾಹಿತಿ ಬಂದಿರಲಿಲ್ಲ
ಆದರೆ, ನಿಯಮ ಉಲ್ಲಂಘನೆಯಾದಲ್ಲಿ ಪ್ರಕರಣ ದಾಖಲಿಸಲು ಅವಕಾಶವಿದೆ,ವಿಡಿಯೋ ನೋಡಿ ಪರಿಶೀಲಿಸಿ ಉಲ್ಲಂಘನೆ ಪ್ರಕರಣ ದಾಖಲಿಸ್ತೇವೆ
ಕೋವಿಡ್ ನಿಯಮ ಉಲ್ಲಂಘನೆಯಾದಲ್ಲಿ ಪ್ರಕರಣ ದಾಖಲಿಸಲೇಬೇಕಾಗುತ್ತದೆ ಎಂದರು.