BREAKING NEWS
Search

Uttrakannada|ಹೆದ್ದಾರಿಯಲ್ಲಿ ದರೋಡೆ-ಇಬ್ಬರು ದರೋಡೆಕೋರರಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು.

317

ಸಿದ್ದಾಪುರ/ಕುಮಟಾ :- ರಸ್ತೆಯಲ್ಲಿ ವಾಹನ ಅಡ್ಡಗಟ್ಟಿ ದರೋಡೆ ಮಾಡುತಿದ್ದವರನ್ನು ಸ್ಥಳೀಯ ಜನರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಂಚಿಕೈ ಗ್ರಾಮದಲ್ಲಿ ಇಂದು ನಡೆದಿದೆ.

ಶಿರಸಿ ಮೂಲದ ಶಫಿ ,ಶಿವಮೊಗ್ಗ ಮೂಲದ ಇರ್ಪಾನ್ ಜನರಿಂದ ಥಳಿತಕ್ಕೊಳಗಾದ ದರೋಡೆಕೋರರಾಗಿದ್ದು ಇಂದು ಕುಮಟಾಕ್ಕೆ ಆಗಮಿಸಿದ್ದ ಇವರು ಬೈಕ್ ಕದ್ದು ದೇವಿಮನೆ ಘಟ್ಟದಲ್ಲಿ ಓರ್ವ ವಾಹನ ಸವಾರನನ್ನು ಅಡ್ಡಗಟ್ಟಿ ದರೋಡೆ ನಡೆಸಿ ನಂತರ ಸಿದ್ದಾಪುರ -ಕಂಚಿಕೈ ಮಾರ್ಗದ ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತಿದ್ದ ಯುವಕನನ್ನು ಅಡ್ಡಗಟ್ಟಿ ಚಾಕು ತೋರಿಸಿ ಹಣ ದರೋಡೆಮಾಡುವಾಗ ಸ್ಥಳೀಯ ಗ್ರಾಮಸ್ಥರು ಗಮನಿಸಿ ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆ ಸಂಬಂಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಥಳಿತದಿಂದ ಗಂಭೀರ ಗಾಯಗೊಂಡಿದ್ದ ಇಬ್ಬರು ದರೋಡೆಕೋರರನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!