ಶಿರಸಿಯಲ್ಲಿ ಭೀಕರ ಅಪಘಾತ: ಐದು ಜನ ಸಾವು

356

ಕಾರವಾರ :- ಕಾರು ಮತ್ತು ಸರ್ಕಾರಿ ಬಸ್ಸಿನ ನಡುವೆ ನಡೆದ ಭೀಕರ ಅಪಘಾತವಾಗಿ (accident) ಕಾರಿನಲ್ಲಿದ್ದ ಐವರು ಮೃತಪಟ್ಟು ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲದಲ್ಲಿ ಶುಕ್ರವಾರ ನಡೆದಿದೆ.

ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ಸು ಹಾಗೂ ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಇದನ್ನೂ ಓದಿ:- Astrology:ದಿನಭವಿಷ್ಯ 08-12-2022

ಕಾರಿನಲ್ಲಿದ್ದ ವ್ಯಕ್ತಿಗಳು ಮಂಗಳೂರು ಸಮೀಪದವರು ಎನ್ನಲಾಗಿದ್ದು, ಗಂಭೀರ ಗಾಯಗೊಂಡ ವ್ಯಕ್ತಿ ತಮಿಳು ನಾಡಿನ ವಿಳಾಸದವರು ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ಸಿನ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿ ಜೊತೆಗೆ 60 ಕ್ಕೂ ಅಧಿಕ ಪ್ರಯಾಣಿಕರಿದ್ದು ಕೆಲವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ.
ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:-Sirsi:ಬಾವಿಯಲ್ಲಿ ಅನಿಲ ಯುಕ್ತ ನೀರು ಸ್ಫೋಟ-ಮೂವರಿಗೆ ಗಂಭೀರ ಗಾಯ
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!