Uttara kannada| ಮಳೆ ಅಬ್ಬರ-ಸಿಡಿಲಿಗೆ ಹಸುಗಳು ಸಾವು -ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು ಗೊತ್ತಾ?

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮಂಗಳವಾಡದಲ್ಲಿ ಸಿಡಿಲು ಬಡಿದು ಎರಡು ಎತ್ತು ಹಾಗೂ ಒಂದು ಆಕಳು ಸಾವನ್ನಪ್ಪಿವೆ. ಭಾರೀ ಗಾಳಿ ಮಳೆಯಿಂದ ಶಾಲಾ ಮೇಲ್ಚಾವಣಿಗೂ ಹಾನಿಯಾಗಿದ್ದು, ಕರಾವಳಿ ಭಾಗಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹಳಿಯಾಳ ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ಭಾರೀ ಮಳೆ ಮತ್ತು ಸಿಡಿಲಿನ ಅಬ್ಬರದ ನಂತರ ಹಾನಿಗೊಳಗಾದ ಪ್ರದೇಶದ ದೃಶ್ಯ ಹಳಿಯಾಳ ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ಭಾರೀ ಮಳೆ ಮತ್ತು ಸಿಡಿಲಿನ ಅಬ್ಬರದ ನಂತರ ಹಾನಿಗೊಳಗಾದ ಪ್ರದೇಶದ ದೃಶ್ಯ
ಕನ್ನಡವಾಣಿ ಚಿತ್ರ - ಪ್ರಸ್ತುತ ಫೋಟೋ ಗೆ Ai ಇಮೇಜ್ ಬಳಸಲಾಗಿದೆ

Uttara kannada| ಮಳೆ ಅಬ್ಬರ-ಸಿಡಿಲಿಗೆ ಹಸುಗಳು ಸಾವು -ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು ಗೊತ್ತಾ?

 

ಹಳಿಯಾಳ : ಉತ್ತರ ಕನ್ನಡ (uttara kannada)ಜಿಲ್ಲೆಯ ಹಲವು ಕಡೆ ಗುಡುಗು ಸಹಿತ ಅಬ್ಬರದ ಮಳೆ ಸುರಿದಿದೆ. ಹಳಿಯಾಳ ತಾಲೂಕಿನ ಮಂಗಳವಾಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ಸುರಿದ ಭಾರೀ ಗಾಳಿ ಮಳೆ ಮತ್ತು ಸಿಡಿಲಿನ ಅಬ್ಬರಕ್ಕೆ ಹಾನಿ ಸಂಭವಿಸಿದೆ.

Advertisement

ಭಾನುವಾರ ಸಂಜೆ ಸುಮಾರು ನಾಲ್ಕು ಗಂಟೆ ವೇಳೆಗೆ ಸಂಭವಿಸಿದ ಅವಘಡದಲ್ಲಿ ಸಿಡಿಲು ಬಡಿದು ರೋಮನ್ ಬಾವಟಿಸ್ ದಾಲ್ಮೆತ್ ಅವರಿಗೆ ಸೇರಿದ ಎರಡು ಎತ್ತುಗಳು ಹಾಗೂ ಒಂದು ಆಕಳು ಮೃತಪಟ್ಟಿವೆ .

ಹಳಿಯಾಳ ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ಭಾರೀ ಮಳೆ ಮತ್ತು ಸಿಡಿಲಿನ ಅಬ್ಬರದ ನಂತರ ಹಾನಿಗೊಳಗಾದ ಪ್ರದೇಶದ ದೃಶ್ಯ
Haliyala -ಸಿಡಿಲಿಗೆ ಆಕಳು ಸಾವು ಕಂಡಿರುವುದು (ನೈಜ ಚಿತ್ರ)

ಈ ಘಟನೆಯಿಂದ ಪಶುಸಂಗೋಪನೆಗೆ ಅವಲಂಬಿತವಾಗಿದ್ದ ಕುಟುಂಬಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.

ಇದೇ ವೇಳೆ ಭಾರೀ ಗಾಳಿ ಮಳೆಯಿಂದ ಮಂಗಳವಾಡ ಪ್ರೌಢಶಾಲೆಯ ಮೇಲ್ಚಾವಣಿಯೂ ಹಾರಿ ಹೋಗಿದ್ದು, ಶಾಲಾ ಕಟ್ಟಡಕ್ಕೆ ಹಾನಿಯಾಗಿದೆ. ಘಟನೆ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಬಿಇಒ ಅವರ ಗಮನಕ್ಕೂ ತರಲಾಗಿದೆ ಎಂದು ಗ್ರಾಮ ಪಂಚಾಯತ್ ಮೂಲಗಳು ತಿಳಿಸಿವೆ.

ಹವಾಮಾನ ಇಲಖೆ ಎಚ್ಚರಿಕೆ

ಇನ್ನು ಕರಾವಳಿ ಭಾಗದಲ್ಲಿ ಹೆಚ್ಚಿನ ಗಾಳಿ ಹಾಗೂ ಮಳೆಯಾಗುವ ಸೂಚನೆ ನೀಡಿದೆ.

ಕರಾವಳಿ ಭಾಗದ ಅರಬ್ಬಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು ,ಮೀನುಗಾರರಿಗೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

Karwar|ಕೊನೆಗೂ ಕಾರವಾರಿಗರ ಸಮಸ್ಯೆಗೆ ಬೀದಿಗಿಳಿದ ಬಿಜೆಪಿ !

ಇನ್ನು ಎರಡು ದಿನ ಕರಾವಳಿ ಭಾಗದಲ್ಲಿ ಗಾಳಿ ಸಹಿತ ಮಳೆಯಾಗುವ ಸೂಚನೆ ನೀಡಲಾಗಿದ್ದು ,ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹಗುರ ಹಾಗೂ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇನ್ನು ಮಲೆನಾಡು ಹಾಗೂ ಬಯಲುಸೀಮೆಯಲ್ಲಿ  ಗುಡುಗು ಹಾಗೂ ತೀವ್ರ ಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದ್ದು ಮಳೆ ಸಂದರ್ಭದಲ್ಲಿ ಸುರಕ್ಷಿತ ಜಾಗದಲ್ಲಿ ಇರಲು ಸೂಚನೆ ನೀಡಲಾಗಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement