Uttara kannada| ಹೆದ್ದಾರಿಯಲ್ಲಿ ಸರಣಿ ಅಪಘಾತ ಓರ್ವ ಸಾವು- ಇಬ್ಬರು ಗಂಭೀರ
ಶಿರಸಿ-ಹುಬ್ಬಳ್ಳಿ ಮಾರ್ಗದಲ್ಲಿ ಅಪಘಾತ-ಸಾವು
ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಶಿರಸಿ-ಹುಬ್ಬಳ್ಳಿ ರಸ್ತೆಯ ಇಸಳೂರು ಸಮೀಪದ ದೊಡ್ಡರು ಕ್ರಾಸ್ನಲ್ಲಿ ನಡೆದಿದೆ.
ಇದನ್ನೂ ಓದಿ:-Sirsi |ಹಾಸ್ಟೆಲ್ ನಲ್ಲೇ ಅಪ್ರಾಪ್ತೆ ಬಾಲಕಿ ಹೆರಿಗೆ-ಟಾಯ್ಲೆಟ್ ನಿಂದ ಹುಟ್ಟಿದ ಮಗು ಎದೆದ ಬಾಲಕಿ
ಮೃತರನ್ನು ಬುಗುಡಿಕೊಪ್ಪ ಗ್ರಾಮದ ನಿವಾಸಿ ಸುನಿಲ್ ಎಂದು ಗುರುತಿಸಲಾಗಿದೆ. ಹಾವೇರಿ-ಶಿರಸಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ ಮಾರ್ಗಮಧ್ಯೆಯೇ ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದ್ದು ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING NEWS | ಯಲ್ಲಾಪುರ-ಹುಬ್ಬಳ್ಳಿ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿಗೆ ಡಿಕ್ಕಿ ಹೊಡೆದ ಬೈಕ್, ಇಬ್ಬರ ಸ್ಥಿತಿ ಗಂಭೀರ!
ಯಲ್ಲಾಪುರ: ಯಲ್ಲಾಪುರ-ಹುಬ್ಬಳ್ಳಿ ಮುಖ್ಯ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ನಲ್ಲಿದ್ದ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಲಭ್ಯವಾಗಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಬೈಕ್ನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದು, ಅವರು ರಾಂಗ್ ಸೈಡ್ನಲ್ಲಿ ಸಂಚರಿಸುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಇಬ್ಬರು ಸವಾರರು ರಸ್ತೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:-Yallapur |ದೇವಸ್ಥಾನದ ಕಾಣಿಕೆ ಡಬ್ಬಿ ಕದ್ದ ಮುಸ್ಲೀಂ ಯುವಕರ ಬಂಧನ
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಹಾಗೂ ಸಾರ್ವಜನಿಕರು ಗಾಯಾಳುಗಳ ನೆರವಿಗೆ ಧಾವಿಸಿ ತುರ್ತು ಚಿಕಿತ್ಸೆಗಾಗಿ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಇಬ್ಬರಿಗೂ ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಗಾಯಗೊಂಡಿರುವ ಇಬ್ಬರೂ ಕೇಬಲ್ ಸಂಪರ್ಕ ಹಾಗೂ ನಿರ್ವಹಣಾ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರು ಎಂಬ ಮಾಹಿತಿ ಲಭ್ಯವಾಗಿದೆ. ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ಈ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ. ಅಪಘಾತದ ಪರಿಣಾಮ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ.
ಸ್ಥಳೀಯರ ಪ್ರಕಾರ, ಯಲ್ಲಾಪುರ-ಹುಬ್ಬಳ್ಳಿ ರಸ್ತೆಯಲ್ಲಿ ವಾಹನಗಳ ಅತಿವೇಗ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆಯಿಂದ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ. ಈ ಘಟನೆಯೂ ಸಹ ನಿರ್ಲಕ್ಷ್ಯ ಮತ್ತು ನಿಯಮ ಉಲ್ಲಂಘನೆಯ ಪರಿಣಾಮವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಅಪಘಾತದ ನಿಖರ ಕಾರಣ, ಗಾಯಾಳುಗಳ ಗುರುತು ಹಾಗೂ ಇತರ ಮಾಹಿತಿ ಪೊಲೀಸ್ ತನಿಖೆಯ ಬಳಿಕ ತಿಳಿದುಬರಬೇಕಿದೆ.







