Uttara Kannada | ಉತ್ತರ ಕನ್ನಡ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಆದೇಶ

DC Lakshmi priya DC Lakshmi priya
DC Uttara kannda
Kannadavani WhatsApp image
ಪ್ರತಿ ದಿನದ ಸುದ್ದಿ ಓದಲು ನಮ್ಮ ವಾಟ್ಸ್ ಅಪ್ ಗ್ರೂಪ್ ಸೇರಲು ಫೋಟೋ ದ ಮೇಲೆ ಕ್ಲಿಕ್ ಮಾಡಿ

ಕಾರವಾರ: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ-2026ರ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅಕ್ಟೋಬರ್ 21ರ ಸಂಜೆ 4 ಗಂಟೆಯಿಂದ ಅಕ್ಟೋಬರ್ 23ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.Uttarakannada |ಕಸದ ತಿಪ್ಪೆಯಾದ ಜಿಲ್ಲಾ ಆಹಾರ ಸುರಕ್ಷಾ ಕಚೇರಿ -ಕಣ್ಣಿದ್ದೂ ಕುರುಡರಾದ ಅಧಿಕಾರಿಗಳು!

ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಳ್ಳುವ 48 ಗಂಟೆಗಳ ಅವಧಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ನಿಷೇಧದ ಅವಧಿಯಲ್ಲಿ ಜಿಲ್ಲೆಯಾದ್ಯಂತ ಮದ್ಯದಂಗಡಿಗಳು ಹಾಗೂ ಮದ್ಯ ತಯಾರಿಕಾ ಘಟಕಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಈ ಅವಧಿಯನ್ನು ಒಣ ದಿನಗಳೆಂದು (Dry Days) ಘೋಷಿಸಲಾಗಿದೆ.

ದಾಂಡೇಲಪ್ಪ ಜಾತ್ರೆ ಹಿನ್ನೆಲೆ: ಅ.20ರಿಂದ ಮದ್ಯ ಮಾರಾಟ ಬಂದ್

ದಾಂಡೇಲಪ್ಪ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ದಾಂಡೇಲಿ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಲಾಗಿದೆ.Dandeli | ದಾಂಡೇಲಿ ಉರುಗ ರಕ್ಷಕ ರಜಾಕ್ ಶಾಕ್ ಗೆ ಅರಣ್ಯ ಇಲಾಖೆ ನೋಟಿಸ್ – ಪರಿಸರ ಪ್ರೇವಿಗಳಿಂದ ಪ್ರಕರಣ ದಾಖಲಿಸುವ ಎಚ್ಚರಿಕೆ .

Advertisement

ಅಕ್ಟೋಬರ್ 20ರ ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್ 21ರ ಬೆಳಗ್ಗೆ 6 ಗಂಟೆಯವರೆಗೆ ದಾಂಡೇಲಿ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಮದ್ಯದಂಗಡಿ ಹಾಗೂ ವೈನ್ ಶಾಪ್‌ಗಳನ್ನು ಮುಚ್ಚುವಂತೆ ಜಿಲ್ಲಾಡಳಿತ ಆದೇಶಿಸಿದೆ.

ಜಾತ್ರೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಈ ನಿರ್ಧಾರದ ಉದ್ದೇಶವಾಗಿದೆ.

ಹೀಗಾಗಿ, ಚುನಾವಣೆಯ ಹಿನ್ನೆಲೆಯಲ್ಲಿ ಅಕ್ಟೋಬರ್ 21ರಿಂದ 23ರವರೆಗೆ ಜಿಲ್ಲೆಯಾದ್ಯಂತ ಹಾಗೂ ದಾಂಡೇಲಪ್ಪ ಜಾತ್ರೆಯ ನಿಮಿತ್ತ ಅಕ್ಟೋಬರ್ 20ರಿಂದ 21ರವರೆಗೆ ದಾಂಡೇಲಿ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ಇರಲಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement