Power cut | ಅ.7ರಂದು ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ ವಿವರ ಇಲ್ಲಿದೆ.
Power cut news:- ಉತ್ತರ ಕನ್ನಡ ಜಿಲ್ಲೆಯ ಕುಮಟಾ,ಕಾರವಾರ,ಹೊನ್ನಾವರ ಭಾಗದಲ್ಲಿ ವಿದ್ಯುತ್ ನಿರ್ವಹಣಾ ಕೆಲಸ ನಡೆಯುತ್ತಿರುವುದರಿಂದ ಈ ಭಾಗದಲ್ಲಿ ಅ.07 ರಂದು ವಿದ್ಯುತ್ ವೆತ್ಯಯ (power cut) ಆಗಲಿದೆ ಎಂದು ಹೆಸ್ಕಾಂ ಪ್ರಕಟಣೆ ಹೊರಡಿಸಿದೆ. ಇದನ್ನೂ ಓದಿ:-Kumta |ದೇವಿಮನೆ ಘಟ್ಟದಲ್ಲಿ ಕಂದಕಕ್ಕೆ ಉರುಳಿದ KSRTC ಬಸ್-12 ಪ್ರಯಾಣಿಕರಿಗೆ ಗಂಭೀರ ಗಾಯ
ಕುಮಟಾದ 110 ಕೆ.ವಿ. ಉಪಕೇಂದ್ರದಲ್ಲಿ 11 ಕೆ.ವಿ. ಧಾರೇಶ್ವರ ಹಾಗೂ 11 ಕೆ.ವಿ. ಬಾಡಾ ಮಾರ್ಗದ ಜಿ.ಒ.ಎಸ್. ನಿರ್ವಹಣಾ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಅ.7ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಧಾರೇಶ್ವರ ಹಾಗೂ ಬಾಡಾ ಮಾರ್ಗಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಕುಮಟಾ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
ಹೊನ್ನಾವರ ತಾಲೂಕಿನ ಗೇರುಸೊಪ್ಪದ 33/11 ಕೆ.ವಿ. ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿನ 33 ಕೆ.ವಿ. ಮಾರ್ಗದ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಅ.7ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ರೈಟ್ ಕಾಲೋನಿ, ಲೆಫ್ಟ್ ಕಾಲೋನಿ, ಮಗೋಡ ಹಾಗೂ ಉಪ್ಪೋಣಿ ಫೀಡರ್‌ಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಹೊನ್ನಾವರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
ಕಾರವಾರ ತಾಲೂಕಿನ ಕಾರವಾರ ಹೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ಲೈನ್ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಅ.7ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ತೇಲಂಗರೋಡ, ನಂದನಗದ್ದಾ, ಕೆ.ಎಚ್.ಬಿ., ಸುಂಕೇರಿ, ಕೋಡಿಬಾಗ ಹಾಗೂ ಕಾರವಾರ ಟೌನ್ ಫೀಡರ್‌ನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಕಾರವಾರ ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
