ಪ್ರಜಾ ಸೇವೆ ಅಭಿಯಾನ- ಉತ್ತರ ಕನ್ನಡ ಜಿಲ್ಲೆಯಲ್ಲಿ 1383 ಅರ್ಜಿ  ಸಲ್ಲಿಕೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಜಾಸೇವೆ ಆಂದೋಲನದ ವೇಳೆ ಸಾರ್ವಜನಿಕರಿಂದ 1,383 ಅರ್ಜಿ ಸಲ್ಲಿಕೆ; ಅಂಕೋಲಾದಲ್ಲಿ 653 ಅರ್ಜಿಗಳು ದಾಖಲು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಜಾಸೇವೆ ಆಂದೋಲನದ ವೇಳೆ ಸಾರ್ವಜನಿಕರಿಂದ 1,383 ಅರ್ಜಿ ಸಲ್ಲಿಕೆ; ಅಂಕೋಲಾದಲ್ಲಿ 653 ಅರ್ಜಿಗಳು ದಾಖಲು

ಕಾರವಾರ (06 ಸೆಪ್ಟೆಂಬರ್ 2026) :-ಉತ್ತರ ಕನ್ನಡ (uttarakannada) ಜಿಲ್ಲೆಯಲ್ಲಿ  ಸೆಪ್ಟೆಂಬರ್ 5 ರಂದು ನಡೆದ ‘ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಜಿಲ್ಲೆಯ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಒಟ್ಟು 1,383 ಅರ್ಜಿಗಳು  ಸಲ್ಲಿಕೆಯಾಗಿದ್ದು, ಈ ಅರ್ಜಿಗಳು ಪ್ರಸ್ತುತ ಪರಿಶೀಲನೆ ಹಾಗೂ ವಿಲೇವಾರಿ ಹಂತದಲ್ಲಿವೆ.

ಸಹಕಾರ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಅಂಕೋಲಾದಲ್ಲಿ ಮತ್ತು ಕುಮಟಾ, ಭಟ್ಕಳ, ಶಿರಸಿ, ಯಲ್ಲಾಪುರ ಹಾಗೂ ಹಳಿಯಾಳ ತಾಲ್ಲೂಕಿನ ವಿವಿಧ ಹೋಬಳಿಗಳಲ್ಲಿ  ಶಾಸಕರ ಅಧ್ಯಕ್ಷತೆಯಲ್ಲಿ ನಡೆದ  ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸಾರ್ವಜನಿಕರು ಸಲ್ಲಿಸಿರುವ ದೂರು ಅರ್ಜಿಗಳಲ್ಲಿ

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬoಧಿಸಿದoತೆ ಗರಿಷ್ಠ 451 ಅರ್ಜಿಗಳು ಸಲ್ಲಿಕೆಯಾಗಿದ್ದು,​ಕಂದಾಯ ಇಲಾಖೆಗೆ 270,  ಇದನ್ನೂ ಓದಿ:-Ankola| ನಡು ರಸ್ತೆಯಲ್ಲೇ ಬಡಿದಾಡಿಕೊಂಡ ಚಾಲಕರು-ಪ್ರಕರಣ ದಾಖಲು

Advertisement

​ನಗರಾಭಿವೃದ್ಧಿ ಇಲಾಖೆಗೆ 135,​ವಸತಿ ಇಲಾಖೆಗೆ 128, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ 102 ಅರ್ಜಿಗಳು ಸಲ್ಲಿಕೆ ಆಗಿದೆ.

ಇನ್ನು ಉಳಿದಂತೆ ಹೆಸ್ಕಾo  ಇಲಾಖೆಗೆ 51, ಲೋಕೋಪಯೋಗಿ ಇಲಾಖೆಗೆ 50, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ 46 ಹಾಗೂ ಸಾರಿಗೆ ಇಲಾಖೆಗೆ 30 ಅರ್ಜಿಗಳು ಸಲ್ಲಿಕೆಯಾಗಿವೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 27, ಸಣ್ಣ ನೀರಾವರಿ ಇಲಾಖೆಗೆ 13, ಕಾರ್ಮಿಕ ಇಲಾಖೆಗೆ 12, ಕೌಶಲ್ಯಾಭಿವೃದ್ಧಿ ಇಲಾಖೆಗೆ 12, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ 10 ಅರ್ಜಿಗಳು ಸಲ್ಲಿಕೆಯಾಗಿವೆ.

​ಅಂತೆಯೇ, ಅರಣ್ಯ ಇಲಾಖೆಗೆ 7, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ 6, ಡಿಪಿಎಆರ್ (ಇ-ಆಡಳಿತ) ಹಾಗೂ ಜಲಸಂಪನ್ಮೂಲ ಇಲಾಖೆಗೆ ತಲಾ 5, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ 4, ಕೃಷಿ ಇಲಾಖೆ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ತಲಾ 3 ಅರ್ಜಿಗಳು ಬಂದಿವೆ. ಸಹಕಾರ, ಮೂಲಸೌಕರ್ಯ, ಸಮಾಜ ಕಲ್ಯಾಣ, ಹಣಕಾಸು, ಗೃಹ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳಿಗೆ ತಲಾ 2 ಅರ್ಜಿಗಳು ಮತ್ತು ಐಟಿ-ಬಿಟಿ ಇಲಾಖೆಗೆ 1 ಅರ್ಜಿ ಸಲ್ಲಿಕೆಯಾಗಿದ್ದು ಒಟ್ಟು 1,383 ಅರ್ಜಿಗಳ ಸಲ್ಲಿಕೆ ಆಗಿವೆ.

 ಅಂಕೋಲದಲ್ಲಖೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಪ್ರಜಾ ಸೇವೆ ಅರ್ಜಿಗಳ ವರದಿಯನ್ನು ಬಿಡುಗಡೆ ಮಾಡಲಾಗಿದೆ. 2026ರ ಸೆಪ್ಟೆಂಬರ್ 5ರ ವರದಿ ಪ್ರಕಾರ ಅಂಕೋಲಾದಲ್ಲಿ ಒಟ್ಟು 653 ಪ್ರಜಾ ಸೇವೆ ಅರ್ಜಿಗಳು ಬಂದಿವೆ.

ವರದಿಯ ಪ್ರಕಾರ ನಗರಾಭಿವೃದ್ಧಿ ಇಲಾಖೆ ಅತಿ ಹೆಚ್ಚು 138 ಪ್ರಕರಣಗಳೊಂದಿಗೆ ಮೊದಲ ಸ್ಥಾನದಲ್ಲಿದ್ದು, ಕಂದಾಯ ಇಲಾಖೆಯಲ್ಲಿ 114, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 104 ಹಾಗೂ ವಸತಿ ಇಲಾಖೆಯಲ್ಲಿ 85 ಪ್ರಕರಣಗಳು ದಾಖಲಾಗಿವೆ. ಇದನ್ನೂ ಓದಿ:-Ankola |ಬಿಜೆಪಿ ಪಾದಯಾತ್ರೆಯಿಂದ ಅವರ ಬಿಪಿ,ಶುಗರ್ ಕಡಿಮೆಯಾಗುತ್ತಿದೆ-ಲಕ್ಷಣ್ ಸವದಿ

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ 49 ಪ್ರಕರಣಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ 33 ಪ್ರಕರಣಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 24 ಪ್ರಕರಣಗಳು ಇವೆ. ಲೋಕೋಪಯೋಗಿ ಇಲಾಖೆಯಲ್ಲಿ 20, ಇಂಧನ ಮತ್ತು ಸಾರಿಗೆ ಇಲಾಖೆಗಳಲ್ಲಿ ತಲಾ 14, ಕಾರ್ಮಿಕ ಇಲಾಖೆಯಲ್ಲಿ 12 ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ 10 ಪ್ರಕರಣಗಳ ಅರ್ಜಿ ದಾಖಲಾಗಿವೆ.

ಇಲಾಖಾವಾರು ವಿವರ ಹೀಗಿದೆ:

ಕೃಷಿ ಇಲಾಖೆ – 2

ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ – 5

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ – 2

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ – 2

ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ-ತಂತ್ರಜ್ಞಾನ ಇಲಾಖೆ – 1

ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ – 2

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ – 10

ಸಮಾಜ ಕಲ್ಯಾಣ ಇಲಾಖೆ – 1

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ – 33

ಡಿಪಿಎಆರ್ (ಇ-ಆಡಳಿತ) – 1

ಇಂಧನ ಇಲಾಖೆ – 14

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ – 49

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ – 2

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 24

ಗೃಹ ಇಲಾಖೆ – 2

ವಸತಿ ಇಲಾಖೆ – 85

ಕನ್ನಡ ಮತ್ತು ಸಂಸ್ಕೃತಿ ಇಲಾಖೆ – 1

ಕಾರ್ಮಿಕ ಇಲಾಖೆ – 12

ಸಣ್ಣ ನೀರಾವರಿ ಇಲಾಖೆ – 2

ಲೋಕೋಪಯೋಗಿ ಇಲಾಖೆ – 20

ಕಂದಾಯ ಇಲಾಖೆ – 114

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ – 104

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ –7

ಸಾರಿಗೆ ಇಲಾಖೆ – 14

ನಗರಾಭಿವೃದ್ಧಿ ಇಲಾಖೆ – 138

ಜಲಸಂಪನ್ಮೂಲ ಇಲಾಖೆ – 6

ಒಟ್ಟಿನಲ್ಲಿ ಇದೀಗ ಇಡೀ ಜಿಲ್ಲೆಯಲ್ಲಿ ತಮ್ಮ ಸಮಸ್ಯೆಗಳನ್ನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಮುಂದೆ ಜನರಿಟ್ಟಿದ್ದಾರೆ. ಬಹುತೇಕ ರಸ್ತೆ, ವಸತಿ ವ್ಯವಸ್ತೆಗಳೇ ಹೆಚ್ಚಿನದಿದ್ದು ಯಾವರೀತಿ ಪರಿಹಾರ ಸಿಗಲಿದೆ ಎಂಬುದನ್ನ ಕಾದು ನೋಡಬೇಕಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement