ಉತ್ತರ ಕನ್ನಡದಲ್ಲಿ ಭಾರಿ ಮಳೆ ಎಚ್ಚರಿಕೆ: ಸೆ.24ರಂದು ಯೆಲ್ಲೋ ಅಲರ್ಟ್

Karnataka rainfall forecast map showing rain prediction across districts for the next three days. Karnataka rainfall forecast map showing rain prediction across districts for the next three days.
Karnataka rainfall forecast map showing rain prediction across districts for the next three days.

ಉತ್ತರ ಕನ್ನಡದಲ್ಲಿ ಭಾರಿ ಮಳೆ ಎಚ್ಚರಿಕೆ: ಸೆ.24ರಂದು ಯೆಲ್ಲೋ ಅಲರ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಸೆಪ್ಟೆಂಬರ್ 24ರಂದು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯ ಜೊತೆಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಸೆ.23ರಂದು ರಾತ್ರಿ ವೇಳೆ ಅತಿ ಭಾರಿ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿ ಸಾಧ್ಯತೆ ಇದ್ದು, ಸೆ.24ರಂದು ಭಾರಿ ಮಳೆಯೊಂದಿಗೆ ಗುಡುಗು-ಮಿಂಚು ಮತ್ತು ಬಿರುಗಾಳಿ ಸಾಧ್ಯತೆ ಇದೆ. ಸೆ.25ರಂದು ಗುಡುಗು-ಮಿಂಚು ಹಾಗೂ ಬಿರುಗಾಳಿಯ ಸಾಧ್ಯತೆ ಮುಂದುವರಿಯಲಿದ್ದು, ಸೆ.26ರಿಂದ ಯಾವುದೇ ಮಳೆ ಎಚ್ಚರಿಕೆ ಇಲ್ಲ ಎಂದು ಇಲಾಖೆ ತಿಳಿಸಿದೆ.

Advertisement

ಉತ್ತರ ಕನ್ನಡಕ್ಕೆ ಏನು ಮುನ್ಸೂಚನೆ?

 ಸೆ.24ರಂದು ಬೆಳಗ್ಗೆ 8.30ರವರೆಗೆ ಉತ್ತರ ಕನ್ನಡ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದೇ ಅವಧಿಯಲ್ಲಿ ಉಡುಪಿ, ಕೊಪ್ಪಳ, ಗದಗ, ರಾಯಚೂರು, ಬೆಳಗಾವಿ, ಧಾರವಾಡ, ಬಳ್ಳಾರಿ, ವಿಜಯನಗರ, ತುಮಕೂರು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕಾರವಾರದಲ್ಲಿ ಸೆ.24ರಂದು ಭಾರಿ ಮಳೆ ಹಾಗೂ 30–40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು-ಮಿಂಚಿನ ಸಾಧ್ಯತೆ ಇದ್ದು ಯಲ್ಲೋ ಅಲರ್ಟ ನೀಡಲಾಗಿದೆ.

ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ

ಉತ್ತರ ಕನ್ನಡ ಜಿಲ್ಲಾಡಳಿತದ ಸೂಚನೆಯಂತೆ, ಮಳೆಯ ಸಂದರ್ಭದಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಪ್ರಮುಖವಾಗಿ

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು 24×7 ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.

ಮಳೆ ಹೆಚ್ಚಾದ ಸಂದರ್ಭದಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು.

ನದಿ, ಹಳ್ಳ, ಕೆರೆ ಹಾಗೂ ಇತರೆ ನೀರಿನ ಪ್ರದೇಶಗಳ ಬಳಿ ಅನಗತ್ಯವಾಗಿ ತೆರಳದಂತೆ ಸೂಚಿಸಲಾಗಿದೆ.

ಪ್ರವಾಹದ ಸಂದರ್ಭದಲ್ಲಿ ನದಿ/ನೀರಿನ ಪ್ರದೇಶಗಳು ಮತ್ತು ಸಮುದ್ರಕ್ಕೆ ಇಳಿಯುವುದನ್ನು ತಪ್ಪಿಸುವಂತೆ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.

ಕೃಷಿಕರು ಮಳೆ ಹಾಗೂ ಗಾಳಿಯ ಮುನ್ಸೂಚನೆಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು.

ಮಳೆ, ಗಾಳಿ ಅಥವಾ ಮಿಂಚಿನ ಸಂದರ್ಭದಲ್ಲಿ ಮರಗಳು ಹಾಗೂ ವಿದ್ಯುತ್ ಕಂಬಗಳ ಕೆಳಗೆ ನಿಲ್ಲದಂತೆ ಎಚ್ಚರಿಕೆ ವಹಿಸಬೇಕು.

ಮಿಂಚಿನ ಸಂದರ್ಭದಲ್ಲಿ ಸುರಕ್ಷಿತ ಕಟ್ಟಡಗಳ ಒಳಗೆ ಆಶ್ರಯ ಪಡೆಯುವಂತೆ ಸೂಚಿಸಲಾಗಿದೆ

ಸೆ.24ರಂದು ಹೆಚ್ಚಾಗಲಿದೆ ಮಳೆ

ಉತ್ತರ ಕನ್ನಡ ಕರಾವಳಿ ಪ್ರದೇಶದಲ್ಲಿ ಮಳೆ ಮತ್ತು ಗಾಳಿಯ ಪರಿಣಾಮ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಹಾಗೂ ಸಾರ್ವಜನಿಕರು ಹವಾಮಾನ ಇಲಾಖೆಯ ಮುನ್ಸೂಚನೆ ಮತ್ತು ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸಲು ಸೂಚಿಸಲಾಗಿದೆ

 

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement