
Uttara kannada | ಜಿಲ್ಲೆಯಲ್ಲಿ ಹಲವು ಕಡೆ ಮಳೆ -ಸಿಡಿಲಿಗೆ ತೆಂಗಿನ ಮರ ಬಸ್ಮ
ಶಿರಸಿ:- ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಿದ್ದಾಪುರ ಭಾಗದಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗಿದ್ದು ಶಿರಸಿ ತಾಲೂಕಿನ ಕಸದತೂರಬಾ ನಗರದ ಸೋನಿಯಾ ಗಲ್ಲಿಯಲ್ಲಿ ರಿಯಾಜ್ ಎಂಬುವವರ ಮನೆಯ ತೆಂಗಿನ ಮರಕ್ಕೆ ಸಿಡಿಲ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮಲೆನಾಡು ಭಾಗದ ಶಿರಸಿ,ಸಿದ್ದಾಪುರ ಸೇರಿಸಂತೆ ಹಲವುಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ.
Karnataka Weather | ನವೆಂಬರ್ 27ರಂದು 7 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಉತ್ತರ ಕನ್ನಡದಲ್ಲಿ ಒಣಹವೆ
ಬೆಂಗಳೂರು: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ನವೆಂಬರ್ 27ರಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳಲ್ಲಿಯೂ ಮುಖ್ಯವಾಗಿ ಒಣ ಹವಾಮಾನ ಇರಲಿದೆ.
ರಾಜ್ಯದ ಯಾವುದೇ ಜಿಲ್ಲೆಗೆ ನವೆಂಬರ್ 27ರಂದು ಭಾರೀ ಮಳೆಯ ಎಚ್ಚರಿಕೆ ನೀಡಲಾಗಿಲ್ಲ.
ಮಾಹಿತಿ ಮೂಲ: ಭಾರತೀಯ ಹವಾಮಾನ ಇಲಾಖೆ (IMD), ಹವಾಮಾನ ಕೇಂದ್ರ ಬೆಂಗಳೂರು.





