Uttara kannada | today ಫಾಟಾ ಫಟ್ ನ್ಯೂಸ್

Uttrakannda News today Uttrakannda News today

Uttara kannada | today ಫಾಟಾ ಫಟ್ ನ್ಯೂಸ್

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಇಂದಿನ ಬೆಳಗಿನ ವಿದ್ಯಮಾನದ ಕುರಿತು ಹೈಲೆಟ್ ಸುದ್ದಿ ಇಲ್ಲಿದೆ.ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ -ಶಿರಸಿ ಮೂಲದ ವ್ಯಕ್ತಿ ಸಾವು.

ಕಾರವಾರದಲ್ಲಿ ಹೆದ್ದಾರಿ ಅಪಘಾತ -ಬೈಕ್ ಸವಾರ ಸಾವು

Karwar highway accident

Advertisement

ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಕಾರವಾರದ (karwar) ಕೊಡಿಬಾಗದಲ್ಲಿ ಗೋವಾ–ಕಾರವಾರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾನುವಾರ ರಾತ್ರಿ ಸುಮಾರು 11 ಗಂಟೆಗೆ ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ,ಶಿರಸಿ ಮೂಲದ ವ್ಯಕ್ತಿ ಅಪಘಾತದಲ್ಲಿ ಮೃತಪಟ್ಟಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಅಪಘಾತದ ತೀವ್ರತೆಗೆ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲಿ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿತ್ತು.ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸರು ನೀಡಬೇಕಿದ್ದು  ಇಂದು ಪ್ರಕರಣ ದಾಖಲಾಗಿದೆ.

ಮನೆಯಲ್ಲಿ ಗೋವಾ ಮದ್ಯದ ಸಂಗ್ರಹ : 42 ಸಾವಿರ ರೂ. ಮೌಲ್ಯದ ಮದ್ಯ ವಶ

Karwar news
ಅಕ್ರಮ ಮದ್ಯ ವಶ

ಕಾರವಾರ (karwar)ತಾಲೂಕಿನ ಹೋಟೆಗಾಳಿ ಗ್ರಾಮದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 34.5 ಲೀಟರ್ ಗೋವಾ ಮದ್ಯ ಹಾಗೂ 65 ಲೀಟರ್ ಬಿಯರ್ ಅನ್ನು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಮದ್ಯದ ಒಟ್ಟು ಮೌಲ್ಯ ₹42,500 ಎಂದು ಅಂದಾಜಿಸಲಾಗಿದೆ. ಮನೆಯ ಮಾಲೀಕ ವಿಜಯ ಪಡುವಳಕರ ದಾಳಿ ವೇಳೆ ಸ್ಥಳದಲ್ಲಿರಲಿಲ್ಲ. ಈ ಕುರಿತು ಅಬಕಾರಿ ಇಲಾಖೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದೆ.

ಯಲ್ಲಾಪುರದಲ್ಲಿ ನ.20ರಂದು ಜಪ್ತಿ ವಾಹನಗಳ ಬಹಿರಂಗ ಹರಾಜು

ಯಲ್ಲಾಪುರ: ಯಲ್ಲಾಪುರ ಪೊಲೀಸ್ ಠಾಣೆಯ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿರುವ ಒಟ್ಟು 9 ವಾಹನಗಳನ್ನು ನವೆಂಬರ್ 20ರಂದು ಸಾರ್ವಜನಿಕ ಬಹಿರಂಗ ಹರಾಜು ಮೂಲಕ ಮಾರಾಟ ಮಾಡಲಾಗುತ್ತದೆ.

ಮಾನ್ಯ ಜೆಎಂಎಫ್‌ಸಿ ಯಲ್ಲಾಪುರ ನ್ಯಾಯಾಲಯದ ಆದೇಶದ ಮೇರೆಗೆ ಈ ಹರಾಜು ಪ್ರಕ್ರಿಯೆ ನಡೆಯಲಿದೆ. ಹರಾಜಿಗೆ ಒಳಪಡುವ ವಾಹನಗಳಲ್ಲಿ ಒಂದು ನಾಲ್ಕು ಚಕ್ರದ ವಾಹನ ಹಾಗೂ ಎಂಟು ದ್ವಿಚಕ್ರ ವಾಹನಗಳು ಸೇರಿವೆ.Karwar | ನೆನೆಗುದಿಗೆಗೆ ಬಿದ್ದ ಯೋಜನೆಗಳಿಗೆ ವೇಗಕೊಡಲು ಸಿದ್ದರಾದ ಡಿ.ಸಿ ಹರ್ಷಲ್ ಏಂದ್ರು ನೋಡಿ.

ನವೆಂಬರ್ 20ರಂದು ಬೆಳಗ್ಗೆ 10 ಗಂಟೆಗೆ ಯಲ್ಲಾಪುರ ಪೊಲೀಸ್ ವಸತಿಗೃಹದ ಸಮೀಪ ಸಾರ್ವಜನಿಕ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಸಾರ್ವಜನಿಕರು ಹರಾಜಿನಲ್ಲಿ ಭಾಗವಹಿಸುವಂತೆ ಯಲ್ಲಾಪುರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Sirsi |ಚೀನಾ ಅರುಣಾಚಲ ಪ್ರದೇಶದ ಜನರಿಗೆ ಪ್ರವಾಸಕ್ಕೂ ವಿಸಾ ನೀಡುತ್ತಿಲ್ಲ- ಪದ್ಮಶ್ರೀ ತೆಚಿ ಗುಬಿನ್

ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ  ಪರೀಕ್ಷೆ  ಸುಸೂತ್ರವಾಗಿ ಮುಕ್ತಾಯ.

ಕಾರವಾರ: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವತಿಯಿಂದ 319 ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ಹುದ್ದೆಗಳ ನೇಮಕಾತಿಗಾಗಿ ಭಾನುವಾರ ಜಿಲ್ಲೆಯಲ್ಲಿ ನಡೆದ ಪರೀಕ್ಷೆಯು   ಅತ್ಯಂತ ಪಾರದರ್ಶಕವಾಗಿ ಪರೀಕ್ಷಾ ಮಾರ್ಗಸೂಚಿಗಳ ಕಡ್ಡಾಯ ಪಾಲನೆಯೊಂದಿಗೆ ಯಾವುದೇ ಗೊಂದಲ ಸಮಸ್ಯೆಗಳಿಲ್ಲದೆ  ಸುಸೂತ್ರವಾಗಿ ಮುಕ್ತಾಯಗೊಂಡಿತುKumta | ಸಿಡಿಲು ಬಡಿದು ಮೇಯಲು ಬಿಟ್ಟ ಏಳು ಜಾನುವಾರುಗಳ ಸಾವು
ಜಿಲ್ಲೆಯಲ್ಲಿ ಕಾರವಾರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು(ಸ್ವಾಯತ್ತ), ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಗೂ ಮಾಜಾಳಿಯ ಸರ್ಕಾರಿ ಇಂಜಿನೀಯರಿoಗ್ ಕಾಲೇಜು ಸೇರಿದಂತೆ ಒಟ್ಟು 4 ಪರೀಕ್ಷಾ ಕೇಂದ್ರಗಳಲ್ಲಿ  ನಡೆದ ಪರೀಕ್ಷೆಗೆ 1970 ಅಭ್ಯರ್ಥಿಗಳು  ನೋಂದಾಯಿಸಿಕೊಂಡಿದ್ದರು.
ಪರೀಕ್ಷೆಯು ಎರಡು ಅವಧಿಗಳಲ್ಲಿ ನಡೆಯಿತು. ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಮೊದಲ ಪತ್ರಿಕೆ ಹಾಗೂ ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಎರಡನೇ ಪತ್ರಿಕೆಯ ಪರೀಕ್ಷೆ ನಡೆಸಲಾಯಿತು. ಮೊದಲ ಅವಧಿಯಲ್ಲಿ ನಡೆದ ಪರೀಕ್ಷೆಗೆ 990 ಅಭ್ಯರ್ಥಿ ಗಳು ಹಾಜರಾಗಿದ್ದು 980 ಮಂದಿ ಗೈರಾಗಿದ್ದರು. ಎರಡನೇ ಅವಧಿಯಲ್ಲಿ ನಡೆದ ಪರೀಕ್ಷೆಗೆ 984 ಅಭ್ಯರ್ಥಿ ಗಳು ಹಾಜರಾಗಿದ್ದು 986 ಮಂದಿ ಗೈರಾಗಿದ್ದರು.Uttara Kannada | ಅಂಕೋಲಾ, ಭಟ್ಕಳ, ಜೋಯಿಡಾಕ್ಕೆ ನೂತನ ತಹಶೀಲ್ದಾರ್‌ಗಳ ನೇಮಕ
ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ಬಾರಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಪ್ರತಿ ಪರೀಕ್ಷಾ ಕೊಠಡಿಗೆ ಇಬ್ಬರು ಮೇಲ್ವಿಚಾರಕರನ್ನು ನೇಮಿಸಲಾಗಿತ್ತು. ಸಿಸಿಟಿವಿ ಕಣ್ಗಾವಲು,  ವೆಬ್ ಕಾಸ್ಟಿಂಗ್ ವ್ಯವಸ್ಥೆ, ಮೊಬೈಲ್ ಜಾಮರ್ ಹಾಗೂ ಅಭ್ಯರ್ಥಿಗಳ ತಪಾಸಣೆಗೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.
 ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು  ಮಾಜಾಳಿಯ ಸರ್ಕಾರಿ ಇಂಜಿನೀಯರಿoಗ್ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಹರ್ಷಲ್ ಬೊಯರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಗೂ ಪರೀಕ್ಷಾ ಕೇಂದ್ರಗಳಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ  ತೆರೆದಿರುವ ವೆಬ್ ಕಾಸ್ಟಿಂಗ್ ಕೇಂದ್ರದ ಪರಿಶೀಲನೆಯನ್ನೂ ಜಿಲ್ಲಾಧಿಕಾರಿ ನಡೆಸಿದರು.

ಕುಮಟಾ: ಉಚಿತ ನೇತ್ರ ತಪಾಸಣೆ ಶಿಬಿರ ಯಶಸ್ವಿ – 30ಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆ ಅಗತ್ಯವಿರುವ ರೋಗಿಗಳ ಗುರುತು

IMG 20261116 WA0001

ಕುಮಟಾ: ತಾಲೂಕಿನ ಕತಗಾಲದ ಸಹಕಾರಿ ಸಂಘದ ಸಭಾಂಗಣದಲ್ಲಿ ಬೆಳಕು ನೇತ್ರಾಲಯ, ಗಜು ಪೈ ಅಭಿಮಾನಿ ಬಳಗ ಹಾಗೂ ಯುಗಾದಿ ಉತ್ಸವ ಸಮಿತಿಯ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿಯಾಗಿ ನಡೆಯಿತು.

ಶಿಬಿರದಲ್ಲಿ ಡಾ. ಮಲ್ಲಿಕಾರ್ಜುನ ಸಿ.ಎಸ್. ನೇತೃತ್ವದ ವೈದ್ಯಕೀಯ ತಂಡ ನೂರಾರು ಸಾರ್ವಜನಿಕರ ಕಣ್ಣಿನ ತಪಾಸಣೆ ನಡೆಸಿತು. ಈ ವೇಳೆ ಶಸ್ತ್ರಚಿಕಿತ್ಸೆಯ ಅಗತ್ಯವಿರುವ 30ಕ್ಕೂ ಹೆಚ್ಚು ರೋಗಿಗಳನ್ನು ಗುರುತಿಸಿ ಮುಂದಿನ ಚಿಕಿತ್ಸೆಗೆ ಸೂಚಿಸಲಾಯಿತು.

ಆರ್ಥಿಕವಾಗಿ ಹಿಂದುಳಿದ ಹಾಗೂ ಗ್ರಾಮೀಣ ಭಾಗದ ಜನರಿಗೆ ಉಚಿತ ನೇತ್ರ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಶಿಬಿರ ಆಯೋಜಿಸಲಾಗಿದೆ ಎಂದು ಗಜು ಪೈ ತಿಳಿಸಿದರು.

ಕಾರ್ಯಕ್ರಮದಲ್ಲಿ ವೈದ್ಯರು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಸಂಘಟನೆಯ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು. ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement