Uttara kannada | ಇಂದಿನ ಫಾಟಾಫಟ್ ಸುದ್ದಿ ಇಲ್ಲಿದೆ.


ಕಾರವಾರದಲ್ಲಿ ನೂತನ ಆಧಾರ್ ಸೇವಾ ಕೇಂದ್ರ ಆರಂಭ
ಕಾರವಾರ: ಉತ್ತರ ಕನ್ನಡ(uttara Kannada) ಜಿಲ್ಲೆಯಲ್ಲಿ ಆಧಾರ್ ನೋಂದಣಿ ಹಾಗೂ ನವೀಕರಣ ಸೇವೆಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ವತಿಯಿಂದ ಕಾರವಾರದಲ್ಲಿ ನೂತನ ಆಧಾರ್ ಸೇವಾ ಕೇಂದ್ರ (ASK) ಆರಂಭಿಸಲಾಗುತ್ತಿದೆ.Karwar | ನೆನೆಗುದಿಗೆಗೆ ಬಿದ್ದ ಯೋಜನೆಗಳಿಗೆ ವೇಗಕೊಡಲು ಸಿದ್ದರಾದ ಡಿ.ಸಿ ಹರ್ಷಲ್ ಏಂದ್ರು ನೋಡಿ.
ಕಾರವಾರದ ಕೋಣೆಕರ್‌ವಾಡದಲ್ಲಿರುವ ವಿರಾಟ್ ಅಪಾರ್ಟ್‌ಮೆಂಟ್‌ನ ನೆಲ ಮಹಡಿಯಲ್ಲಿ ಈ ಕೇಂದ್ರವನ್ನು ಸ್ಥಾಪಿಸಲಾಗಿದ್ದು,ಇಂದಿನಿಂದ ಪ್ರಾರಂಭಗೊಂಡಿದೆ.

ಜಿಲ್ಲೆಯ ಜನರಿಗೆ ಆಧಾರ್ ನೋಂದಣಿ ಹಾಗೂ ಆಧಾರ್ ವಿವರಗಳ ನವೀಕರಣ ಸೇವೆಗಳನ್ನು ಸುಲಭವಾಗಿ ಮತ್ತು ತ್ವರಿತವಾಗಿ ಒದಗಿಸುವ ಉದ್ದೇಶದಿಂದ ಈ ಕೇಂದ್ರವನ್ನು ಆರಂಭಿಸಲಾಗುತ್ತಿದೆ.Sirsi | ದೀಪಾವಳಿ ಪ್ರಯುಕ್ತ ಹೊಸಿಲು ದಾಟಿದ ಶ್ರೀಮಾರಿಕಾಂಬಾ ದೇವಾಲಯದ ಪಟ್ಟದ ಕೋಣ-ವಿಡಿಯೋ ನೋಡಿ.
ಇದರಿಂದ ಸಾರ್ವಜನಿಕರು ಒಂದೇ ಸ್ಥಳದಲ್ಲಿ ಅಗತ್ಯ ಆಧಾರ್ ಸೇವೆಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ಯುಐಡಿಎಐ ಬೆಂಗಳೂರು ಪ್ರಾದೇಶಿಕ ಕಚೇರಿಯ ನಿರ್ದೇಶಕರು ತಿಳಿಸಿದ್ದಾರೆ.
ಕರಾವಳಿ ಭದ್ರತೆಗೆ ‘ಸೀ ವಿಜಿಲ್ 2026’ ಸಮರಾಭ್ಯಾಸ: ನೌಕಾಪಡೆ ಭಾಗಿ
ಕಾರವಾರ: ದೇಶದ ಕರಾವಳಿ ತೀರದ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಭಾರತೀಯ ನೌಕಾಪಡೆಯು ‘ಸೀ ವಿಜಿಲ್ 2026’ ರಾಷ್ಟ್ರೀಯ ಕರಾವಳಿ ರಕ್ಷಣಾ ಸಮರಾಭ್ಯಾಸದಲ್ಲಿ ಭಾಗವಹಿಸಲಿದೆ. ಕರಾವಳಿಯಲ್ಲಿ ಎದುರಾಗಬಹುದಾದ ಭದ್ರತಾ ಸವಾಲುಗಳನ್ನು ಸಮರ್ಥವಾಗಿ ಎದುರಿಸುವುದು ಹಾಗೂ ವಿವಿಧ ಭದ್ರತಾ ಸಂಸ್ಥೆಗಳ ಕಾರ್ಯಾಚರಣೆಯ ಸನ್ನದ್ಧತೆಯನ್ನು ಪರೀಕ್ಷಿಸುವುದು ಈ ಅಭ್ಯಾಸದ ಪ್ರಮುಖ ಉದ್ದೇಶವಾಗಿದೆ.ಭಾರತೀಯ ಕರಾವಳಿ ರಕ್ಷಣಾ ಪಡೆ, ಕಸ್ಟಮ್ಸ್ ಇಲಾಖೆ, ಕರಾವಳಿ ಪೊಲೀಸ್, ರಾಜ್ಯ ಆಡಳಿತ, ಬಂದರು ಪ್ರಾಧಿಕಾರ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಈ ಸಮರಾಭ್ಯಾಸ ನಡೆಯಲಿದೆ. 2018ರಲ್ಲಿ ಆರಂಭಗೊಂಡಿರುವ ಈ ದ್ವೈವಾರ್ಷಿಕ ರಾಷ್ಟ್ರೀಯ ಮಟ್ಟದ ಅಭ್ಯಾಸದ ಐದನೇ ಆವೃತ್ತಿ ಇದಾಗಿದ್ದು, ದೇಶದ ಸಮಗ್ರ ಕಡಲ ಭದ್ರತಾ ವ್ಯವಸ್ಥೆಯ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸುವ ಗುರಿ ಹೊಂದಿದೆ.Kumta | ಕುಮಟಾದಲ್ಲಿ ಚಿರತೆ ದಾಳಿ ಗ್ರಾಮದಲ್ಲಿ ಆತಂಕ ವಾತಾವರಣ
ಸಮುದ್ರ ಮಾರ್ಗದ ಮೂಲಕ ಎದುರಾಗಬಹುದಾದ ಅನಿರೀಕ್ಷಿತ ಸವಾಲುಗಳು ಹಾಗೂ ಭದ್ರತಾ ಬೆದರಿಕೆಗಳನ್ನು ಎದುರಿಸಲು ವಿವಿಧ ಇಲಾಖೆಗಳು ಎಷ್ಟರ ಮಟ್ಟಿಗೆ ಸನ್ನದ್ಧವಾಗಿವೆ ಎಂಬುದನ್ನು ಈ ಅಭ್ಯಾಸದ ಮೂಲಕ ಪರಿಶೀಲಿಸಲಾಗುತ್ತದೆ.
ಶಿರಸಿ ಅರಣ್ಯ ಮಹಾವಿದ್ಯಾಲಯ: ಸಹಾಯಕ ಪ್ರಾಧ್ಯಾಪಕರ ಹುದ್ದೆಯ ಸಂದರ್ಶನ ನ.24ಕ್ಕೆ ಮುಂದೂಡಿಕೆ
ಕಾರವಾರ: ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಶಿರಸಿಯ (sirsi)ಅರಣ್ಯ ಮಹಾವಿದ್ಯಾಲಯದಲ್ಲಿ ಕೃಷಿ ಸಂಖ್ಯಾಶಾಸ್ತ್ರ ವಿಷಯ ಬೋಧಿಸಲು ಸಹಾಯಕ ಪ್ರಾಧ್ಯಾಪಕರ ಖಾಲಿ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ/ಅರೆಕಾಲಿಕ ಶಿಕ್ಷಕರ ನೇಮಕಾತಿಗಾಗಿ ನಿಗದಿಪಡಿಸಲಾಗಿದ್ದ ಸಂದರ್ಶನವನ್ನು ಮುಂದೂಡಲಾಗಿದೆ.
179 ದಿನಗಳ ಅವಧಿಗೆ ಮೀರದಂತೆ ಒಬ್ಬ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿತ್ತು. ಈ ಹಿಂದೆ ನವೆಂಬರ್ 18ರಂದು ಬೆಳಗ್ಗೆ 11 ಗಂಟೆಗೆ ನಿಗದಿಯಾಗಿದ್ದ ಸಂದರ್ಶನವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಿ, ಇದೀಗ ನವೆಂಬರ್ 24ರಂದು ಬೆಳಗ್ಗೆ 11 ಗಂಟೆಗೆ ಮರು ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ಶಿರಸಿಯ ಅರಣ್ಯ ಮಹಾವಿದ್ಯಾಲಯದ ಡೀನ್ (ಅರಣ್ಯ) ಅವರ ಕಾರ್ಯಾಲಯದಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ “www.uasd.edu.in” (https://www.uasd.edu.in) ಗೆ ಭೇಟಿ ನೀಡಬಹುದು ಅಥವಾ 9448630255 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಅರಣ್ಯ ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ರಮ ಮರಳಗಾರಿಕೆ ಮೇಲೆ ಕಣ್ಣಿಟ್ಟ ಜಿಲ್ಲಾಧಿಕಾರಿ

ಕಾರವಾರ: ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಮತ್ತು ಸಾಗಣೆಯನ್ನು ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು. ಪದೇಪದೇ ಅಕ್ರಮ ಮರಳು ಸಾಗಣೆಯಲ್ಲಿ ಸಿಕ್ಕಿಬೀಳುವ ವಾಹನಗಳ ನೋಂದಣಿ ರದ್ದತಿಗೂ ಅವಕಾಶವಿದ್ದು, ಈ ಕುರಿತು ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಹರ್ಷಲ್ ಭೂಯರ್ ತಿಳಿಸಿದರು.Honnavar |ಶೌಚಾಲಯದ ಕೊಠಡಿಯಲ್ಲಿ ಅಕ್ರಮವಾಗಿ ಗೋವಾ ಮದ್ಯ ದಾಸ್ತಾನು ಮಾಡಿದವ ಅಂದರ್ !
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರ ವಹಿಸಿಕೊಂಡ ಬಳಿಕ ಅಧಿಕಾರಿಗಳ ಸಭೆ ನಡೆಸಿ ಜಿಲ್ಲೆಯ ಮರಳುಗಾರಿಕೆ ಕುರಿತು ಮಾಹಿತಿ ಪಡೆದಿದ್ದೇನೆ. ಅಕ್ರಮ ಸಾಗಣೆ ತಡೆಗೆ ಆರ್‌ಟಿಒ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಟಿಪ್ಪರ್ ಸಂಘದವರೊಂದಿಗೂ ಮಾತುಕತೆ ನಡೆಸಲಾಗುವುದು ಎಂದರು.
ಉದ್ದೇಶಿತ ಕೇಣಿ ಬಂದರು ಯೋಜನೆಯ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದು, ಇದು ನವಮಂಗಳೂರು ಬಂದರಿಗಿಂತ ದೊಡ್ಡ ವಾಣಿಜ್ಯ ಬಂದರಾಗುವ ಸಾಧ್ಯತೆಯಿದೆ. ವಿಶಾಲ ಭೌಗೋಳಿಕ ವ್ಯಾಪ್ತಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾರ್ಯಗಳ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.
ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಕಾರವಾರ ಸೇರಿದಂತೆ ವಿವಿಧ ಕಡಲತೀರಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಉತ್ತೇಜಿಸಲಾಗುವುದು. ಚತುಷ್ಪಥ ರಸ್ತೆ ಕಾಮಗಾರಿಗಳ ವಿಳಂಬದ ಬಗ್ಗೆ ಐಆರ್‌ಬಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗುವುದು ಎಂದರು.

