ಉತ್ತರ ಕನ್ನಡ -34,575 ಶಾಶ್ವತ ವಲಸೆ 41,103 ಮರಣ ಹೊಂದಿದ ಮತದಾರರು!
ಕಾರವಾರ:- ಉತ್ತರ ಕನ್ನಡ (uttara Kannada) ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷಕ್ಕರಣೆ-2026 ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿದೆ.
ಇದುವರೆಗೂ ಜಿಲ್ಲೆಯಾದ್ಯಂತ 11,11,885 ಫಾರ್ಮ್ಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.
ಈ ವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 89,689 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 34,575 ಶಾಶ್ವತ ವಲಸೆ ಹಾಗೂ 41,103 ಮರಣ ಹೊಂದಿದ ಪ್ರಕರಣಗಳು,10,349 ದ್ವಿಪ್ರತಿಗಳು ಸೇರಿವೆ ಎಂದು ತಿಳಿಸಿದ್ದಾರೆ.
ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,23,390 ಮತದಾರರಿದ್ದು, ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ -2026 ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿದ್ದು, ಇದುವರೆಗೆ 1,97,235 ಫಾರ್ಮ್ ಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಕಾರವಾರ ವಿಧಾನಸಭಾ ಕ್ಷೇತ್ರದ ಮತದಾರರ ನೊಂದಣಾಧಿಕಾರಿ ಹಾಗೂ ಸಹಾಯಕ ಆಯುಕ್ತರು ತಿಳಿಸಿದ್ದಾರೆ.
ಕ್ಷೇತ್ರದಲ್ಲಿ ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 25,513 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 8,194 ಶಾಶ್ವತ ವಲಸೆ ಹಾಗೂ 8,463 ಮರಣ ಹೊಂದಿದ ಪ್ರಕರಣಗಳು ಹಾಗೂ 3,382 ದ್ವಿಪ್ರತಿಗಳು ಸೇರಿವೆ ಎಂದು ತಿಳಿಸಿದ್ದಾರೆ.
ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,92,055 ಮತದಾರರಿದ್ದು, ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ -2026 ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿದ್ದು, ಇದುವರೆಗೆ 1,77,183 ಫಾರ್ಮ್ ಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಕುಮಟಾ ವಿಧಾನಸಭಾ ಕ್ಷೇತ್ರದ ಮತದಾರರ ನೊಂದಣಾಧಿಕಾರಿ ಹಾಗೂ ಸಹಾಯಕ ಆಯುಕ್ತರು ತಿಳಿಸಿದ್ದಾರೆ.
ಕ್ಷೇತ್ರದಲ್ಲಿ ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬ0ಧಿಸಿದ0ತೆ ಒಟ್ಟು 14,872 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 6011 ಶಾಶ್ವತ ವಲಸೆ ಹಾಗೂ 7218 ಮರಣ ಹೊಂದಿದ ಪ್ರಕರಣಗಳು ಹಾಗೂ 1021 ದ್ವಿಪ್ರತಿಗಳು ಸೇರಿವೆ ಎಂದು ತಿಳಿಸಿದ್ದಾರೆ.
