ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂ.14 ರಿಂದ 21 ರ ವರೆಗೆ ಲಾಕ್ ಡೌನ್ ಸಡಿಲಿಕೆ- ಮುಲೈ ಮುಗಿಲನ್.

7122

ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಲಾಕ್ ಡೌನ್ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ನವರು ಆದೇಶ ಹೊರಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಗೂಗಲ್ ಮೀಟ್ ಮೂಲಕ ಮಾಹಿತಿ ನೀಡಿದ ಅವರು ಜಿಲ್ಲೆಯಲ್ಲಿ ಜೂ.14 ರಿಂದ 21 ವರೆಗೆ ಬೆಳಗ್ಗೆ 6 ರಿಂದ ಮಧ್ಯಾನ 2 ವರೆಗೆ ಮಾತ್ರ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ಮಾಡಿಕೊಡಲಾಗಿದೆ.ಮಧ್ಯಾನ ಎರಡು ಘಂಟೆ ವರೆಗೆ ಮಾತ್ರ ಮದ್ಯದ ಅಂಗಡಿ ತೆರೆಯಲು ಅವಕಾಶ ನೀಡಿದೆ.ಶನಿವಾರ ಮತ್ತು ಭಾನುವಾರ ವೀಕೆಂಡ್ ಲಾಕ್ ಡೌನ್ ಮುಂದುವರೆಯಲಿದೆ.
ಜಿಲ್ಲೆಯಾಧ್ಯಾಂತ ನೈಟ್ ಕರ್ಫೂ ಮುಂದುವರಿಕೆ ಮಾಡಲಾಗಿದೆ.

ಜಿಲ್ಲೆಯ ಮೈಕ್ರೋ ಕಂಟೈನ್ಮೆಂಟ್ ಝೋನ್ ನಲ್ಲಿ ಎಂದಿನಂತೆ ಲಾಕ್ ಡೌನ್ ಮುಂದುವರಿಕೆ ಮಾಡಲಾಗಿದೆ. ಈ ಪ್ರದೇಶಗಳಲ್ಲಿ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆಯುವಂತಿಲ್ಲ. ಹಾಗೂ ಸ್ಥಳೀಯ ಆಡಳಿತ ಅಗತ್ಯ ವಸ್ತುಗಳನ್ನು ಮನೆ ಮನೆಗೆ ತಲುಪಿಸಲಿದೆ‌.ಮುಂದಿನ ಆದೇಶದ ವರೆಗೆ ಮದುವೆ ಹಾಗೂ ಯಾವುದೇ ಸಮಾರಂಭಕ್ಕೆ ಅನುಮತಿ ಇಲ್ಲ.
ಗೋವಾ-ಕರ್ನಾಟಕ ಗಡಿಯಲ್ಲಿ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಲ್ಲ, ಪಾರ್ಕ ಗಳಲ್ಲಿ ಬೆಳಗ್ಗೆ 5 ರಿಂದ 10 ಘಂಟೆ ವರೆಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ.ಜಿಲ್ಲಾ ಗಡಿಯಲ್ಲಿ ತಪಾಸಣೆ ಮುಂದುವರಿಯಲಿದೆ. ಜನ ಹೆಚ್ಚು ಸೇರದಂತೆ ನಿಯಮಗಳನ್ನು ರೂಪಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಆದೇಶ ಮಾಡಿದ ಪ್ರತಿ ಈ ಕೆಳಗಿನಂತಿದೆ:-
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!