ಶಿರಸಿಯಲ್ಲಿ ಅನಿರ್ದಿಷ್ಟಾವಧಿ ನಿಷೇಧಾಜ್ಞೆ ಜಾರಿ ಬೂದಿ ಮುಚ್ಚಿದ ಕೆಂಡವಾದ ನಗರ

3908

ಶಿರಸಿ: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಿರಸಿ ತಾಲ್ಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್‌ ಎಂ.ಆರ್.ಕುಲಕರ್ಣಿರವರು ಆದೇಶ ಹೊರಡಿಸಿದ್ದಾರೆ.

ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವುದು ಸೂಕ್ತ ಎನಿಸಿದೆ. ಮುಂದಿನ ಆದೇಶ ಜಾರಿಯಾಗುವವರೆಗೆ ಪದವಿ, ಪದವಿಪೂರ್ವ ಕಾಲೇಜುಗಳು ಮತ್ತು ಪ್ರೌಢಶಾಲೆಗಳ ಸುತ್ತಲಿನ 200 ಮೀ. ವ್ಯಾಪ್ತಿಯೊಳಗೆ ಯಾವುದೇ ಘೋಷಣೆ ಕೂಗಲು, ಗುಂಪುಗಾರಿಕೆ ನಡೆಸಲು ಮತ್ತು ಧಾರ್ಮಿಕ ಭಾವನೆಗೆ ಧಕ್ಕೆ ತರುವ ಚಟುವಟಿಕೆ ನಡೆಸಬಾರದು ಎಂದು ಆದೇಶಿಸಿದ್ದಾರೆ.

ಇನ್ನು ಯಾವುದೇ ವಿಧದ ಶಸ್ತ್ರಾಸ್ತ್ರ ಕೊಂಡೊಯ್ಯಬಾರದು. ಪಟಾಕಿ ಸಿಡಿಸಬಾರದು. ವ್ಯಕ್ತಿಗಳ ಅಥವಾ ಪ್ರತಿಕೃತಿಗಳ ಪ್ರದರ್ಶನವನ್ನೂ ಮಾಡಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಶಿರಸಿಯಲ್ಲಿ ಬೂದಿ ಮುಚ್ಚಿದ ಕೆಂಡ.!


ಶಿರಸಿಯಲ್ಲಿ ನಿನ್ನೆ ದಿನ ಹಿಜಾಬ್ ಸಂಘರ್ಷ ತಾರಕ್ಕೆ ಏರಿತ್ತು‌ . ಇದರ ಜೊತೆಗೆ ಕೆಲವು ಸಂಘಟನೆಗಳು ಈ ವಿಷಯವನ್ನು ದೊಡ್ಡದಾಗಿ ಮಾಡುವ ಪ್ರಯತ್ನಕ್ಕೆ ಕೈ ಹಾಕಿವೆ. ಇನ್ನು ಗುಪ್ತಚರ ಇಲಾಖೆ ಮಾಹಿತಿ ಪ್ರಕಾರ ಈ ಹಿಂದೆ ಪರೇಶ್ ಮೇಸ್ತಾ ಪ್ರಕರಣದಲ್ಲಿ ನಡೆದ ಗಲಭೆಯ ಪ್ರತಿಕಾರ ತೀರಿಸಲು ಕೆಲವು ಸಂಘಟನೆ ಸಜ್ಜಾಗಿದೆ ಎನ್ನಲಾಗಿದೆ. ಹೀಗಾಗಿ ಯಾವ ಸಂದರ್ಭದಲ್ಲಿ ಏನೂ ಬೇಕಾದರೂ ಘಟಿದಬಹುದು ಎಂಬ ಕಾರಣದಿಂದ ಇದೀಗ ಅನಿರ್ದಿಷ್ಟಾವಧಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!