ಕಾರವಾರ:- ಮಹರಾಷ್ಟ್ರದ ಮುಖ್ಯಮಂತ್ರಿ ಉದ್ಬವ್ ಠಾಕ್ರೆ ಕರ್ನಾಟಕ ವಿರೋಧಿ ಹೇಳಿಕೆ ಖಂಡಿಸಿ ಗಡಿ ಜಿಲ್ಲೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಕರವೇ ನಾರಾಯಣಗೌಡ ಬಣ ಮಹರಾಷ್ಟ್ರದ ಮುಖ್ಯಮಂತ್ರಿ ಉದ್ಭವ್ ಠಾಕ್ರೆ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಕಾರವಾರ ಗಡಿಯಲ್ಲಿ ಮಹರಾಷ್ಟ್ರ ನೊಂದಣಿ ವಾಹನ ಬಂದ್ ಮಾಡುವ ಎಚ್ಚರಿಕೆ.


ಕಾರವಾದ ಸುಭಾಷ್ ಸರ್ಕಲ್ ಬಳಿ ಮಹರಾಷ್ಟ್ರ ಮುಖ್ಯಮಂತ್ರಿ ಉದ್ಭವ್ ಠಾಕ್ರೆ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿದ ಕರವೇ ನಾರಾಯಣ ಗೌಡ ಬಣದ ಕಾರ್ಯಕರ್ತರು ಬೆಳಗಾವಿ ,ಕಾರವಾರ ಮಹರಾಷ್ಟ್ರಕ್ಕೆ ಸೇರಬೇಕು ಎಂಬ ಮಹಾರಾಷ್ಟ್ರದ ಮುಖ್ಯಮಂತ್ರಿ ಹೇಳಿಕೆಗೆ ಅಕ್ರೋಶ ವ್ಯಕ್ತಪಡಿಸಿದರು. ಇನ್ನು ಕರವೇ ಜಿಲ್ಲಾಧ್ಯಕ್ಷ ಭಾಸ್ಕರ್ ಪಟಗಾರ್ ಮಾತನಾಡಿ ಇದೇ ರೀತಿ ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಖ್ಯಾತೆ ತೆಗೆದರೆ. ಗಡಿಯಲ್ಲಿ ಮಹರಾಷ್ಟ್ರ ನೊಂದಣಿ ವಾಹನಗಳು ಕರ್ನಾಟಕಕ್ಕೆ ಬಾರದಂತೆ ತಡೆಯುತ್ತೇವೆ ಮುಂದಿನ ದಿನದಲ್ಲಿ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.