BREAKING NEWS
Search

ಸಾಲ ಬಾಧೆ -ಹೆಂಡತಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಯುವಕ.

335

ಕಾರವಾರ :- ಸಾಲ ಮಾಡಿಕೊಂಡಿದ್ದನ್ನೇ ಮನಸ್ಸಿಗೆ ಹಚ್ಚಿಕೊಂಡು ವಿವಾಹಿತನೋರ್ವ ಪತ್ನಿಗೆ ಕರೆ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರವಾರ ನಗರದಲ್ಲಿ ನಡೆದಿದೆ.
ಮಹದ್ ಶಫೀಕ್ (34) ಆತ್ಮಹತ್ಯೆ ಮಾಡಿಕೊಂಡಾತನಾಗಿದ್ದು ,ಕಾರವಾರ ಚಿತ್ತಾಕುಲಾ ನಾಕುದಾಮೊಹಲ್ಲಾದ ಈತ ತನ್ನ ಪತ್ನಿ ಸಮೀರಾಳಿಗೆ ಕರೆ ಮಾಡಿ ಮನೆಯ ಪಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ ಈತ ಮದ್ಯ ವ್ಯಸನಿಯಾಗಿದ್ದ‌ . ಹಲವು ಕಡೆ ಸಾಲ ಮಾಡಿಕೊಂಡಿದ್ದ ಈತ ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಚಿತ್ತಾಕುಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!