BREAKING NEWS
Search

ಶಾಲೆಗೆ ಹೋಗುತಿದ್ದ 20 ಕ್ಕೂ ಹೆಚ್ಚು ಮಕ್ಕಳ ಮೇಲೆ ಜೇನು ದಾಳಿ-16 ಮಕ್ಕಳು ಗಂಭೀರ

2060

ಕಾರವಾರ :- ಶಾಲೆಗೆ ಬರುತಿದ್ದ 20ಕ್ಕೂ ಹೆಚ್ಚು ಮಕ್ಕಳಿಗೆ ಜೇನು ನೊಣ ಕಡಿದ ಘಟನೆ ಕಾರವಾರ ತಾಲೂಕಿನ ಕಿನ್ನರ ಗ್ರಾಮದ ನ್ಯೂ ಹೈಸ್ಕೂಲ್ ನಲ್ಲಿ ಇಂದು ನಡೆದಿದೆ.

ಜೇನು ಕಡಿತದಿಂದ 16 ಜನ ಮಕ್ಕಳು ಗಂಭೀರ ಗಾಯಗೊಂಡು ಅಸ್ವಸ್ತರಾಗಿದ್ದು, ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇಂದು ಬೆಳಗ್ಗೆ ಶಾಲೆಗೆ ಮಕ್ಕಳು ಹೋಗುತ್ತಿರುವಾಗ ಏಕಾ ಏಕಿ ಶಾಲೆಯ ಪಕ್ಕದಲ್ಲೇ ಇರುವ ತೆಂಗಿನ ಮರದಲ್ಲಿ ಗೂಡ ಕಟ್ಟಿದ್ದ ಜೇನು ನೊಣ ದಾಳಿ ಮಾಡಿದೆ. ಇದರದ 20 ಕ್ಕೂ ಹೆಚ್ಚು ಮಕ್ಕಳಿಗೆ ಜೇನು ಕಡಿದಿದೆ.ತಕ್ಷಣದಲ್ಲಿ 16 ಜನ ಮಕ್ಕಳನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದಲ್ಲದೇ ಗ್ರಾಮದ ಓರ್ವ ಪುರುಷ ಹಾಗೂ ಮಹಿಳೆಗೂ ಜೇನು ಕಚ್ಚಿದ್ದು ಗಂಭೀರ ಗಾಯಗೊಂಡ ಇವರನ್ನು ಸಹ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಗೆ ಶಾಸಕಿ ರೂಪಾಲಿ ನಾಯ್ಕ ಭೇಟಿ.

ಇನ್ನು ಘಟನೆ ನಡೆದ ವಿಷಯ ತಿಳಿದ ಕಾರವಾರದ ಶಾಸಕಿ ರೂಪಾಲಿ ನಾಯ್ಕ ರವರು ಸ್ಥಳಕ್ಕೆ ಭೇಟಿ ನೀಡಿ ಮಕ್ಕಳ ಸ್ಥಿತಿ ಗತಿ ವಿಚಾರಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಮಕ್ಕಳಮೇಲೆ ಜೇನು ಹೆಚ್ಚಿನ ಹಾನಿ ಹಾನಿ ಮಾಡಿದೆ. ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚಿಸಲಾಗಿದೆ. ಅರಣ್ಯ ಇಲಾಖೆಗೂ ಸಹ ಸೂಚನೆ ನೀಡಲಾಗಿದ್ದು ಶಾಲಾ ಆವರಣದಲ್ಲಿ ಇರುವ ಜೇನನ್ನು ತೆರವು ಗೊಳಿಸಲು ತಿಳಿಸಲಾಗಿದೆ ಎಂದರು.

ಹೆಚ್ಚಿದ ಜೇನು ಹಾವಳಿ

ಕಾರವಾರ ಮತ್ತು ಅಂಕೋಲ ಭಾಗದಲ್ಲಿ ದಿನದಿಂದ ದಿನಕ್ಕೆ ಜೇನು ಹಾವಳಿ ಮಿತಿಮಿರಿದ್ದು ಡಿ.23 ರಂದು
ಅಂಕೋಲದ ಅಜ್ಜಿಕಟ್ಟದ ನಿಲಂಪುರದಲ್ಲಿ
ಹಸನ್ ಖಾನ್ ಕರೀಂ ಖಾನ್ ಎಂಬುವವರು ಜೇನು ಕಡಿದು ಮೃತರಾಗಿದ್ದಾರೆ. ಇನ್ನು ಕಾರವಾರ ಅಂಕೊಲ ಭಾಗದಲ್ಲಿ ಕಳೆದ ಒಂದು ವಾರದಲ್ಲಿ 60 ಕ್ಕೂ ಹೆಚ್ಚು ಜನರಿಗೆ ಜೇನು ಕಡಿದ ವರದಿಯಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!