BREAKING NEWS
Search

ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಡಾ.ಎಂ.ಪಿ ಕರ್ಕಿ ವಿಧಿವಶ.

808

ಕಾರವಾರ :-ಕುಮಟಾ ಹೊನ್ನಾವರ ಕ್ಷೇತ್ರದ ಮಾಜಿ ಶಾಸಕ ಡಾ.ಎಂ.ಪಿ ಕರ್ಕಿ(87) ವಯೋ ಸಹಜತೆಯಿಂದ ಹೊನ್ನಾವರದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ವೈದ್ಯರಾಗಿ ವೃತ್ತಿ ಆರಂಭಿಸಿದ ಕರ್ಕಿಯವರು ಜನಸಂಘ ದಿಂದ ಬಿಜೆಪಿ ಪಕ್ಷವನ್ನು ಜಿಲ್ಲೆಯಲ್ಲಿ ಕಟ್ಟಿದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು. ಜಿಲ್ಲಾಧ್ಯಕ್ಷರಾಗಿ ರಾಜಕೀಯ ಸೇವೆ ಮಾಡಿದ ಇವರು 1983 ಮತ್ತು 1994 ರಲ್ಲಿ ಎರಡುಬಾರಿ ಶಾಸಕರಾಗಿ ವಿಧಾನಸಭೆಗೆ ಆಯ್ಕೆಯಾಗಿದ್ದರು.ಒಂದು ಬಾರಿ ಲೋಕಸಭೆಗೆ ಕೂಡ ಸ್ಪರ್ಧೆ ಮಾಡಿದ್ದರು.ಸಾಮಾಜಿಕವಾಗಿ ಗುರುತಿಸಿಕೊಂಡಿದ್ದ ಇವರು ಹೊನ್ನಾವರದ ಎಂ.ಪಿ.ಇ ಸೊಸೈಟಿ ಅಧ್ಯಕ್ಷರಾಗಿದ್ದರು.
ದೀಘ್ರಾವಧಿಯ ಖಾಯಿಲೆಯಿಂದ ಬಳಲುತಿದ್ದ ಇವರಿಗೆ ಕೆಲವು ತಿಂಗಳ ಹಿಂದೆ ಮಣಿಪಾಲ್ ಹಾಗೂ ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಶ್ರೀಯುತರು ಪತ್ನಿ, ಪುತ್ರ,ಪುತ್ರಿಯನ್ನು ಅಗಲಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!