ಮುಂಡಗೋಡು-108 ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

372

ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ 108 ಅಂಬ್ಯುಲೆನ್ಸ್ ನಲ್ಲೇ ಗರ್ಭೀಣಿ ಹೆಣ್ಣು ಮಗುವಿಗೆ ಜನ್ಮನೀಡಿದ ಘಟನೆ ಶನಿವಾರ ರಾತ್ರಿ ನಡೆದಿದೆ
ಮುಂಡಗೋಡು ತಾಲೂಕಿನ ಇಂದೂರ ಗ್ರಾಮದ ದಾವಲಬಿ ಮಹಬೂಬಷಾ ಹನಕನಹಳ್ಳಿ(19) ಹೆಣ್ಣು ಮಗುವಿಗೆ ಜನ್ಮನೀಡಿದ ಗರ್ಭೀಣಿಯಾಗಿದ್ದಾಳೆ.

ಇದು ಗರ್ಭೀಣಿಯ ಮೊದಲನೇ ಹೆರಿಗೆಯಾಗಿದ್ದು
ಅಧಿಕ ರಕ್ತದೊತ್ತಡ ಹಾಗೂ ಹೆರಿಗೆ ನೋವು ಕಾಣಿಸಿದ್ದರಿಂದ ತಾಲೂಕ ಆಸ್ಪತ್ರೆಯ ಯವರು ಹುಬ್ಬಳ್ಳಿ ಕಿಮ್ಸ್ ಗೆ ಕಳಿಸಿಕೊಟ್ಟಿದ್ದರು. ಹೆರಿಗೆ ನೋವು ಹೆಚ್ಚಾಗಿದ್ದರಿಂದ ವರೂರ ಬಳಿ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ ಬಳೂರ ಸುರಕ್ಷೀತವಾಗಿ ಹೆರಿಗೆ ಮಾಡಿಸಿದ್ದಾರೆ. ತಾಯಿ ಮಗು ಇಬ್ಬರು ಸುರಕ್ಷಿತವಾಗಿ ಇದ್ದು ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕ ಕೆಂಚೇಶ. ಇ.ಎನ್ ಇದ್ದರು




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!