Uttarakannada,ಶಿವಮೊಗ್ಗ ಸೇರಿದಂತೆ ಜಿಲ್ಲಾಧಿಕಾರಿ ವರ್ಗಾವಣೆ ಲಕ್ಷ್ಮಿಪ್ರಿಯಾ ಬೆಂಗಳೂರಿಗೆ ವರ್ಗಾವಣೆ

Uttara Kannada DC transfer Uttara Kannada DC transfer
Uttarakannada,ಶಿವಮೊಗ್ಗ ಸೇರಿದಂತೆ ಜಿಲ್ಲಾಧಿಕಾರಿ ವರ್ಗಾವಣೆ ಲಕ್ಷ್ಮಿಪ್ರಿಯಾ ಬೆಂಗಳೂರಿಗೆ ವರ್ಗಾವಣೆ

Uttarakannada,ಶಿವಮೊಗ್ಗ ಸೇರಿದಂತೆ ಜಿಲ್ಲಾಧಿಕಾರಿ ವರ್ಗಾವಣೆ ಲಕ್ಷ್ಮಿಪ್ರಿಯಾ ಬೆಂಗಳೂರಿಗೆ ವರ್ಗಾವಣೆ

ಕಾರವಾರ:- ಉತ್ತರ ಕನ್ನಡ (uttarakannada)ಜಿಲ್ಲೆಯ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಕೆ. ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು 2026ರ ಅಕ್ಟೋಬರ್ 6ರಂದು ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಪ್ರಸ್ತುತ ಉತ್ತರ ಕನ್ನಡ(uttarakannada) ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಲಕ್ಷ್ಮಿಪ್ರಿಯಾ ಕೆ. (2015ನೇ ಬ್ಯಾಚ್) ಅವರನ್ನು ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಚುನಾವಣೆ, ವಿಪತ್ತು ನಿರ್ವಹಣೆ, ಸಾರ್ವಜನಿಕ ಸಂಪರ್ಕ ಹಾಗೂ ಸಮನ್ವಯ ವಿಭಾಗಗಳ ಜವಾಬ್ದಾರಿಯನ್ನು ಅವರು ನಿರ್ವಹಿಸಲಿದ್ದಾರೆ.

Advertisement

ಇವರ ಸ್ಥಾನಕ್ಕೆ ಭೋಯರ್ ಹರ್ಷಲ್ ನಾರಾಯಣರಾವ್ (2016ನೇ ಬ್ಯಾಚ್) ಅವರನ್ನು ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಇವರು ಈ ಹಿಂದೆ ಬೆಂಗಳೂರಿನ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ-ಆಡಳಿತ ವಿಭಾಗದಲ್ಲಿ ನಾಗರಿಕ ಸೇವೆಗಳ ವಿದ್ಯುನ್ಮಾನ ವಿತರಣಾ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಇದೇ ವೇಳೆ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿದ್ದ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧ್ಯಕ್ಷರಾಗಿದ್ದ ಪ್ರಕಾಶ್ ಜಿ.ಟಿ. ನಿಟ್ಟಾಲಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.ಈ ಎಲ್ಲಾ ವರ್ಗಾವಣೆಗಳು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ಆದೇಶಿಸಿದೆ.S.I.R Uttarakannada Exclusive news | ಉತ್ತರ ಕನ್ನಡ ಜಿಲ್ಲೆಯಲ್ಲಿ ಪಾಕಿಸ್ತಾನ, ಬಾಂಗ್ಲಾ ಪ್ರಜೆಗಳ ಬಳಿಯೂ ಓಟರ್ ಐ.ಡಿ ಪತ್ತೆ ! 

ಉತ್ತರ ಕನ್ನಡ ಜಿಲ್ಲೆಯ ಆಡಳಿತದ ಹೊಣೆ ಹೊತ್ತಿದ್ದ ಲಕ್ಷ್ಮಿಪ್ರಿಯಾ ಕೆ. ಅವರ ವರ್ಗಾವಣೆಯೊಂದಿಗೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಭೋಯರ್ ಹರ್ಷಲ್ ನಾರಾಯಣರಾವ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಭೋಯರ್ ಹರ್ಷಲ್ ನಾರಾಯಣರಾವ್ ಅವರು 2016ನೇ ಬ್ಯಾಚ್‌ನ ಕರ್ನಾಟಕ ಕೆಡರ್‌ನ ಭಾರತೀಯ ಆಡಳಿತ ಸೇವೆ (IAS) ಅಧಿಕಾರಿ ಆಗಿದ್ದಾರೆ.

ಪ್ರಸ್ತುತ ಹುದ್ದೆ: ಪ್ರಸ್ತುತ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಇ-ಆಡಳಿತ) ನಾಗರಿಕ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ (EDCS) ವಿಭಾಗದ ನಿರ್ದೇಶಕರಾಗಿ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದರೊಂದಿಗೆ ಬೆಂಗಳೂರಿನ ‘ಸಕಾಲ ಮಿಷನ್’ನ ಹೆಚ್ಚುವರಿ ಮಿಷನ್ ನಿರ್ದೇಶಕ-II ಆಗಿ ಹೆಚ್ಚುವರಿ ಜವಾಬ್ದಾರಿಯನ್ನು ಸಹ ಹೊಂದಿದ್ದಾರೆ.

ಹುಟ್ಟಿದ ದಿನಾಂಕ: 19 ಫೆಬ್ರವರಿ 1986.

ಸ್ವಂತ ರಾಜ್ಯ: ಮಹಾರಾಷ್ಟ್ರ.

ಶೈಕ್ಷಣಿಕ ಅರ್ಹತೆ: ಪುಣೆ ವಿಶ್ವವಿದ್ಯಾಲಯದಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿ.ಇ (Bachelor of Engineering) ಪದವಿ ಪಡೆದಿದ್ದಾರೆ.

ನೇಮಕಾತಿ: ಯುಪಿಎಸ್‌ಸಿ (UPSC) ನಾಗರಿಕ ಸೇವಾ ಪರೀಕ್ಷೆಯ ಮೂಲಕ ನೇರ ನೇಮಕಾತಿ (Direct Recruit) ಪಡೆದಿದ್ದಾರೆ.

ಅವರ ವೃತ್ತಿಜೀವನದ ಪ್ರಮುಖ ಹುದ್ದೆಗಳು:

  • ಸಹಾಯಕ ಕಮಿಷನರ್, ಭಟ್ಕಳ ಉಪವಿಭಾಗ
  • ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO), ಚಾಮರಾಜನಗರ ಜಿಲ್ಲಾ ಪಂಚಾಯತ್
  • ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO), ವಿಜಯನಗರ ಜಿಲ್ಲಾ ಪಂಚಾಯತ್
  • ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO), ಬೆಳಗಾವಿ ಜಿಲ್ಲಾ ಪಂಚಾಯತ್
  • ನಿರ್ದೇಶಕರು, ಅಟಲ್ ಜನಸ್ನೇಹಿ ಕೇಂದ್ರ (AJSK), ಬೆಂಗಳೂರು
  • ಜಿಲ್ಲಾಧಿಕಾರಿ (DC), ಯಾದಗಿರಿ ಜಿಲ್ಲೆ 
Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement