ಕಾರವಾರ :- ಸೋದರ ಮಾವನಿಂದಲೇ 11 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಸಿದ್ದಾಪುರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಹೆಗ್ಗೆಕೊಪ್ಪದ ಕಮಲಾಕರ( 27 ವರ್ಷ, )ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ . ಷೋಷಿತ ಬಾಲಕಿಯನ್ನು ಇದೀಗ ವೈದ್ಯಕೀಯ ಪರೀಕ್ಷೆಗೆ ರವಾನಿಸಲಾಗಿದೆ.

ಶಾಲೆಯಿಂದ ಹೊರಟವಳನ್ನು ಅತ್ಯಾಚಾರ ಮಾಡಿದ.
ಶಾಲೆಯಿಂದ ಹೊರಟ ವಿದ್ಯಾರ್ಥಿನಿಯನ್ನು ಮನೆಗೆ ಬಿಡುವುದಾಗಿ ಹೇಳಿ ಬೈಕ್ ನಲ್ಲಿ ಕುಳ್ಳಿರಿಸಿಕೊಂಡ ಆರೋಪಿ ಮಾರ್ಗ ಮಧ್ಯದಲ್ಲಿ ಆಕೆಯನ್ನು ಕಾಡಿನಲ್ಲಿ ಅತ್ಯಾಚಾರ ಮಾಡಿದ್ದಾನೆ. ನಂತರ ಆಕೆಯನ್ನು ಹೆದರಿಸಿ ಮನೆಗೆ ಬಿಟ್ಟು ಹೋಗಿದ್ದಾನೆ. ವಿಷಯ ತಿಳಿಯುತಿದ್ದಂತೆ ಆಕೆಯ ಪೊಷಕರು ಸಿದ್ದಾಪುರ ಠಾಣೆಗೆ ದೂರು ನೀಡಿದ್ದು ತಕ್ಷಣಾ ಆರೋಪಿಯನ್ನು ಬಂಧಿಸಿದ್ದಾರೆ.