ಉತ್ತರ ಕನ್ನಡ ಜಿಲ್ಲೆ-SSLC ಫಲಿತಾಂಶದಲ್ಲಿ ಬಾಲಕಿಯರ ಮೇಲುಗೈ!

2110

ಕಾರವಾರ:- ರಾಜ್ಯದಲ್ಲಿ ಇಂದು ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಶಿರಸಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯಲ್ಲಿ ಮೂವರು ವಿದ್ಯಾರ್ಥಿಯರು ಹಾಗೂ ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಓರ್ವ ವಿದ್ಯಾರ್ಥಿನಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ್ದಾರೆ.

ಶಿರಸಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯ ಸಿದ್ದಾಪುರದ ಪ್ರಶಾಂತಿ ವಿದ್ಯಾನಿಕೇತನದಲ್ಲಿ ಓದುತ್ತಿರೋ ವಿದ್ಯಾರ್ಥಿನಿ ಹೇಮಾ ಉಮೇಶ ಹೆಗಡೆ ಹಾಗೂ ಸಿದ್ದಾಪುರದ ಕಾನಸೂರಿನ ಕಾಳಿಕಾ ಭವಾನಿ ಪ್ರೌಢಶಾಲೆಯ ಎಸ್.ಎನ್.ಸುನೈ ಮತ್ತು ರೇಷ್ಮಾ ಹೆಗಡೆ 625 ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ.

ಸಿದ್ದಾಪುರದ ಕಾನಸೂರಿನ ಕಾಳಿಕಾ ಭವಾನಿ ಪ್ರೌಢಶಾಲೆಯ ಎಸ್.ಎನ್.ಸುನೈ


ಇನ್ನು ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸರ್ಕಾರಿ ಪ್ರಾಥಮಿಕ ಫ್ರೌಡಶಾಲೆಯ ಭೂಮಿಕ ಕೃಷ್ಣ ನಾಯ್ಕ 625 ಅಂಕಕ್ಕೆ 625 ಅಂಕ ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ.
ಕಳೆದ ವರ್ಷ ಒಬ್ಬ ವಿದ್ಯಾರ್ಥಿನಿ 625 ಅಂಕ ಗಳಿಸಿ ಸಾಧನೆ ಮಾಡಿದ್ದಳು.

ಆದರೆ ಈ ಬಾರಿ ಮೂವರು ವಿದ್ಯಾರ್ಥಿಗಳು 625 ಅಂಕ ಪಡೆದು ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಓರ್ವ ವಿದ್ಯಾರ್ಥಿನಿ ಸಾಧನೆ ಮಾಡಿದ್ದಾಳೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!