ಕಾರವಾರ:- ಅಬ್ಬರದ ಮಳೆಗೆ ಮನೆಯ ಮಣ್ಣಿನ ಗೋಡೆ ಕುಸಿದು ಮಹಿಳೆ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪುರ ಗ್ರಾಮಪಂಚಾಯ್ತಿ ವ್ಯಾಪ್ತಿಯ ಮುಂಡಿಗೆಹಳ್ಳಿಯಲ್ಲಿ ಇಂದು ಸಂಜೆ ನಡೆದಿದೆ.
ಯಶೋದಾ ಬಂಗಾರ್ಯ ಗೌಡ(31) ಮನೆ ಗೋಡೆ ಕುಸಿದು ಮೃತಪಟ್ಟ ಮಹಿಳೆಯಾಗಿದ್ದಾಳೆ.ಸತತ ಮಳೆಯಿಂದ ಮನೆಯ ಮಣ್ಣಿನ ಗೋಡೆ ಕುಸಿದು ಈಕೆಯ ಮೇಲೆ ಬಿದ್ದಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಇನ್ನು ಮೃತ ಕುಟುಂಬಕ್ಕೆ ತಕ್ಷಣದಲ್ಲಿ ಐದು ಲಕ್ಷ ಪರಿಹಾರ ನೀಡುವ ಭರವಸೆ ನೀಡಿದರು.