ನಾಳೆ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ-ಜಿಲ್ಲೆಯಲ್ಲಿ ಲಸಿಕೆ ಎಷ್ಟಿದೆ ಯಾವ ಲಸಿಕೆ ನೀಡಲಿದ್ದಾರೆ. ವಿವರ ನೋಡಿ

950

ಕಾರವಾರ:- ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನಾಂಕ 03-1-2022 ರಿಂದ 15 ರಿಂದ 18 ವರ್ಷ ವಯೋಮಾನದ ಮಕ್ಕಳಿಗೆ ಕೋವಿಡ್ ಲಸಿಕಾಕರಣ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ. 2007 ನೇ ಇಸವಿ ಹಾಗೂ ಅದಕ್ಕೂ ಪೂರ್ವದಲ್ಲಿ ಹುಟ್ಟಿದ ಮಕ್ಕಳಿಗೆ ಮೊದಲನೇ ಡೋಸ್ ಕೋವ್ಯಾಕ್ಸಿನ್ ಲಸಿಕೆಯನ್ನು ನೀಡಲಾಗುತ್ತದೆ.

ಜಿಲ್ಲೆಯಲ್ಲಿ 15 ರಿಂದ 18 ಒಳಗೆ ಇರುವ ಮಕ್ಕಳ ಸಂಖ್ಯೆ 66001 ಇದೆ. ಸದ್ಯ ಜಿಲ್ಲೆಯಲ್ಲಿ 37000 ಕೋವ್ಯಾಕ್ಸಿನ್ ಲಭ್ಯವಿದೆ. ಜ.3 ರಂದು ವ್ಯಾಕ್ಸಿನ್ ನೀಡಲು170 ತಂಡಗಳನ್ನು ನಿಯೋಜನೆ ಮಾಡಲಾಗಿದೆ. 15000 ಮಕ್ಕಳಿಗೆ
ಮೊದಲ ದಿನ ವ್ಯಾಕ್ಸಿನ್ ನೀಡುವ ಗುರಿಯನ್ನು ಆರೋಗ್ಯ ಇಲಾಖೆ ಹೊಂದಿದೆ.
ಜಿಲ್ಲೆಯಲ್ಲಿ 169 ಶಾಲಾ ಕಾಲೇಜುಗಳಲ್ಲಿ ಲಸಿಕೆ ನೀಡಲಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 18 ವರ್ಷ ಮೇಲ್ಪಟ್ಟ ಒಟ್ಟು 1044511 ಫಲಾನುಭವಿಗಳಿಗೆ ಮೊದಲನೇ ಡೋಸ್ ಲಸಿಕೆಯನ್ನು, ಹಾಗೂ ಇವರುಗಳ ಪೈಕಿ 883463 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!