ಕಾರವಾರ :- ಚಲಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮ ವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಜೋಡಕೆರೆ ಬಳಿ ಇಂದು ಮುಂಜಾನೆ ನಡೆದಿದೆ.


ಮುಂಬೈ ನಿಂದ ಮಂಗಳೂರು ಕಡೆ ರಾಷ್ಟೀಯ ಹೆದ್ದಾರಿ 63 ರ ಮೂಲಕ ಬಸ್ ಸಂಚರಿಸುತಿದ್ದು ,22ಪ್ರಯಾಣಿಕರು ಪ್ರಯಾಣಿಸುತಿದ್ದರು. ಈವೇಳೆ ಬಸ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ತಗಲಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಜುರಾಗಿ ಬೆಂಕಿ ನಂದಿಸಿದ್ದು ಘಟನೆ ಯಲ್ಲಾಪುರ ಠಾಣಾ ಪ್ಯಾಪ್ತಿಯಲ್ಲಿ ನಡೆದಿದ್ದು 20 ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.