BREAKING NEWS
Search

ಅನಂತಮೂರ್ತಿ ಹೆಗಡೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಪಾದಯಾತ್ರೆ: ಶಾಸಕ ದಿನಕರ ಶೆಟ್ಟಿ ಭಾಗಿ ಕುಮಟಾ ಜನರ ಬೆಂಬಲ.

83

ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಶಿರಸಿಯಿಂದ ಕಾರವಾರದವರೆಗೆ ಜಿಲ್ಲೆಯ ಜನರಿಗಾಗಿ ಪಾದಯಾತ್ರೆ ಮಾಡುತ್ತಿರುವ ಅನಂತಮೂರ್ತಿ ಹೆಗಡೆಯವರ ಕೆಲಸ ಪುಣ್ಯದ ಕೆಲಸ, ಇಂತಹ ಕೆಲಸವನ್ನು ನಾವೆಲ್ಲರೂ ಬೆಂಬಲಿಸಬೇಕು ಎಂದು ಕುಮಟಾ – ಹೊನ್ನಾವರ ಶಾಸಕ ದಿನಕರ ಶೆಟ್ಟಿ ಹೇಳಿದರು.

ಅವರು ಇಂದು ಸಮಾಜ ಸೇವಕ ಶಿರಸಿ ಅನಂತಮೂರ್ತಿ ಹೆಗಡೆಯವರು ಜಿಲ್ಲೆಯಲ್ಲಿ ಎರಡು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಹಮ್ಮಿಕೊಂಡ ಶಿರಸಿಯಿಂದ ಕಾರವಾರದವರೆಗೆ ಪಾದಯಾತ್ರೆಯೂ ಇಂದು ಕುಮಟಾ ನಗರವನ್ನು ಆಗಮಿಸಿದ್ದು ಪಾದಯಾತ್ರೆಯನ್ನು ಸ್ವಾಗತಿಸಿ ಇಲ್ಲಿನ‌ ಮಹಾಸತಿ ದೇವಾಲಯದ ಮುಂಭಾಗ ಆಯೋಜಿಸಿದ ಸಭೆಯಲ್ಲಿ ಮಾತನಾಡುತ್ತಾ ಶಿರಸಿಯಿಂದ ಕಾರವಾರದವರೆಗೆ ಪಾದಯಾತ್ರೆ ಮಾಡುವುದು ಎಂದು ಅದು ಸುಲಭದ ಮಾತಲ್ಲ, ಅವರು ಒಂದು‌ ದಿಟ್ಟ ನಿರ್ಧಾರ ಮಾಡಿದ್ದಾರೆ. ಈ ಕೆಲಸ ಯಾರಿಂದಾದರೂ ಆಗಲಿ ಆದರೆ ಒಂದು ಒಳ್ಳೆಯ ಕೆಲಸ ಆಗಿ ಜನರಿಗೆ ಅನಕೂಲವಾಗಲಿ, ನಮ್ಮ‌‌ ನಿಮ್ಮೇಲ್ಲರ ಪರವಾಗಿ ಹೋರಾಟ ಮಾಡುತ್ತಿದ್ದಾರೆ. ಪಕ್ಕದ ಜಿಲ್ಲೆಯ ಜನಪ್ರತಿನಿಧಿಗಳ ಹಾಗೆ ನಾವೆಲ್ಲ ಜನಪ್ರತಿನಿಧಿಗಳು ಪಕ್ಷ ಭೇದ ಮರೆತು ಆಸ್ಪತ್ರೆ ಸ್ಥಾಪನೆಗೆ ಒಗ್ಗಟ್ಟು ಪ್ರದರ್ಶನ ಮಾಡೋಣ, ಯಾವ ಸರ್ಕಾರ ಮಾಡಿದರೇನು ಒಟ್ಟಿನಲ್ಲಿ ಆಸ್ಪತ್ರೆಯಾಗಿ ಜನರಿಗೆ ಅನುಕೂಲ ಆಗಲಿ, ಕಾಂಗ್ರೆಸ್ ಸರ್ಕಾರ ಆಸ್ಪತ್ರೆ ನೀಡುವ ಗ್ಯಾರಂಟಿ ನೀಡಲಿ ಎಂದರು.

ನಂತರ ಮಾತನಾಡಿದ ಪಾದಯಾತ್ರೆಯ ರೂವಾರಿಯಾದ ಅನಂತಮೂರ್ತಿ ಹೆಗಡೆ ಹಿಂದಿನ‌ ಬಿಜೆಪಿ ಸರ್ಕಾರ ಇದ್ದಾಗ ಕುಮಟಾದಲ್ಲಿ ಆಸ್ಪತ್ರೆ ನಿರ್ಮಾಣಕ್ಕಾಗಿ ಸರ್ಕಾರ ಜಾಗವನ್ನು ಪರಿಶೀಲನೆ‌ಮಾಡಿತ್ತು, ನಂತರ ಬಿಜೆಪಿ‌ ಸರ್ಕಾರ ಅಧಿಕಾರ ಕಳೆದುಕೊಂಡಿತು ಮುಂದೆ ಹಣವು ಕೂಡ ಬಿಡುಗಡೆಯಾಗಿಲ್ಲ, ಮುಂದೆ ಯಾವುದೇ ಪ್ರಕ್ರಿಯೇಯೂ ಮುಂದುವರೆಯಲಿಲ್ಲ ಇದು ಶಾಸಕರು ಮಾಡಿದ ಪ್ರಯತ್ನ ವ್ಯರ್ಥವಾಗಿದೆ. ಎಲ್ಲಿಯಾದರೂ ಕೂಡ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನೆಡೆಯಬೇಕು ಎಂದರೆ ಅಲ್ಲಿ ಮೆಡಿಕಲ್ ಕಾಲೇಜು ಇರಬೇಕು, ಕಾಲೇಜು ಇಲ್ಲ ಎಂದರೆ ವೈದ್ಯಾಧಿಕಾರಿಗಳ ಕೊರತೆ ಉಂಟಾಗುತ್ತದೆ ಆದ್ದರಿಂದ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಗಲೇಬೇಕು ಇದಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಒಗ್ಗಟ್ಟನ್ನು ತೋರಿಸಬೇಕು ಎಂದರು.

ಕುಮಟಾದ ಹಿರಿಯ ವಕೀಲ ಆರ್. ಜಿ.ನಾಯ್ಕ ಮಾತನಾಡುತ್ತಾ, ಅನಂತಮೂರ್ತಿ ಹೆಗಡೆಯವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಅವರಿಗೆ ದೇವರು ಶಕ್ತಿ ನೀಡಲಿ, ನಾನು ಶಾಸಕ ದಿನಕರ ಶೇಟ್ಟಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳಿಗೆ ಒಂದು ಮಾತನ್ನು ಹೇಳುತ್ತೇನೆ ಈ ಆಸ್ಪತ್ರೆ ವಿಚಾರವಾಗಿ ತಾವೇಲ್ಲರೂ ಒಗ್ಗಟ್ಟಾಗಿ ಪ್ರಯತ್ನ ಮಾಡಿ, ಉಸ್ತುವಾರಿ ಸಚಿವರು ಒಂದು ಸಭೆ ಕರೆದು ನಮ್ಮೇಲ್ಲರ ಅಭಿಪ್ರಾಯ ಸಂಗ್ರಹಿಸಿ ಜಿಲ್ಲೆಗೆ ಒಳ್ಳೆಯ ಕೆಲಸ ಮಾಡಲಿ ಎಂದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಸೇರಿದಂತೆ ನೂರಾರು ಜನರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು, ನಂತರ ಪಾದಯಾತ್ರೆಯು ದಿವಗಿ ಮೂಲಕ ಸಾಗಿದ ಪಾದಯಾತ್ರೆಗೆ ಮಿರ್ಜಾನನಲ್ಲಿ ಭವ್ಯ ಸ್ವಾಗತ‌ನೀಡಿ ಅಲ್ಲಿನ‌ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ಸ್ಥಳೀಯರು ಪಾದಯಾತ್ರೆಗೆ ಬೆಂಬಲ ನೀಡಿದರು. ಇಂದು ತಾಲೂಕಿನ ಬಗ್ರಿಯಲ್ಲಿ‌ ಪಾದಯಾತ್ರೆಯೂ ವಾಸ್ತವ್ಯವಾಗಲಿದೆ.

ಕುಮಟಾ ಆಟೋ ರಿಕ್ಷಾ ಚಾಲಕರ ಬೆಂಬಲ
ಕುಮಟಾ ನಗರಕ್ಕೆ ಆಗಮಿಸುತ್ತಿದ್ದಂತೆ ನೂರಾರು ಆಟೋ ಚಾಲಕರು ತಮ್ಮ ಆಟೋದೊಂದಿಗೆ ಸ್ಥಳಕ್ಕೆ ಧಾವಿಸಿ ಕುಮಟಾ ಪಟ್ಟಣದಿಂದ ಸ್ವಯಂಪ್ರೇರಿತರಾಗಿ ದಿವಗಿವರೆಗೆ ಆಗಮಿಸಿ ಭವ್ಯ ಸ್ವಾಗತ ಕೋರಿ ಅಭೂತಪೂರ್ವ ಬೆಂಬಲ ಸೂಚಿಸಿದರು.‌
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!