KAS ಗ್ರೇಡ್ ನ ಕಾರವಾರದ ಭೂಸ್ವಾಧೀನಾಧಿಕಾರಿ ಪೊಲೀಸರ ವಶಕ್ಕೆ|ವಿವರ ನೋಡಿ.

319

ಬೆಂಗಳೂರು :- ಕಾರವಾರದಲ್ಲಿ (Karwar) ಜಿಲ್ಲಾಧಿಕಾರಿ ಕಚೇರಿಯಲ್ಲಿರುವ (DC Office)ಸೀಬರ್ಡ ನೌಕಾನೆಲೆಯ ಭೂಸ್ವಾಧೀನಾಧಿಕಾರಿ ಉಮೇಶ್ ರವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಘಟನೆ ಏನು?

ಇದನ್ನೂ ಓದಿ:- ಸರ್ಕಾರಿ ಜಮೀನು ನುಂಗಿದ KAS ಅಧಿಕಾರಿ.

ಕಡೂರು ತಾಲ್ಲೂಕಿನ ಉಳ್ಳಿನಾಗರು ಗ್ರಾಮದ ಸರ್ವೆ ನಂಬರ್ 43ರಲ್ಲಿ 5 ಎಕರೆ 4 ಗುಂಟೆ ಸರ್ಕಾರಿ ಜಮೀನನ್ನು ಹನುಮಂತಯ್ಯ ಬಿನ್‌ ಚಿಕ್ಕಣ್ಣ ಎಂಬುವರ ಹೆಸರಿಗೆ ಖಾತೆ ದಾಖಲಿಸಿ ನಂತರ ಪೌತಿ ಖಾತೆ, ದಾನಪತ್ರ, ಕ್ರಯಪತ್ರ ಮಾಡಲಾಗಿದೆ. ಇದು ನಿಯಮ ಬಾಹಿರವಾಗಿದ್ದು, ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಸೂಚಿಸಿದ್ದರು.

ಅದರ ಅನ್ವಯ ತರೀಕೆರೆ ಉಪವಿಭಾಗಾಧಿಕಾರಿ ಕೆ.ಜೆ.ಕಾಂತರಾಜ್ ಅವರು ಆ.12ರಂದು ಕಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಶಿರಸ್ತೆದಾರ್ ನಂಜುಂಡಯ್ಯ, ಕಂದಾಯ ನಿರೀಕ್ಷಕ ಕಿರಣ್‌ಕುಮಾರ್ ಅವರ ಹೆಸರನ್ನೂ ದೂರಿನಲ್ಲಿ ಉಲ್ಲೇಖಿಸಿದ್ದರು. ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಜೆ.ಉಮೇಶ್ ಅವರನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದು ಕಡೂರಿಗೆ ಕರೆತಂದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಕಡೂರಿನಲ್ಲಿ ಈ ಹಿಂದಿನ ತಹಶೀಲ್ದಾರ್ ಆಗಿದ್ದ ಕಿರಿಯ ಶ್ರೇಣಿ ಕೆಎಎಸ್‌ ಆಧಿಕಾರಿ ಆಗಿರುವ ಜೆ.ಉಮೇಶ್, ಸದ್ಯ ಕಾರವಾರದಲ್ಲಿ ಸೀಬರ್ಡ್‌ ನೌಕಾನೆಲೆಯ ಭೂಸ್ವಾಧೀನಾಧಿಕಾರಿಯಾಗಿದ್ದಾರೆ. ಕೆಲವು ದಿನಗಳ ಹಿಂದೆ ಕಾರವಾರದ ಕಚೇರಿಯಿಂದ ನಾಪತ್ತೆಯಾಗಿದ್ದರು.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!