Multi Speciality Hospital ಗಾಗಿ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳ ಒತ್ತಾಯ,ನಾಳೆ ಅನಂತಮೂರ್ತಿ ಹೆಗಡೆ ಪಾದಯಾತ್ರೆ.

98

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ನಿರ್ಮಾಣ ಮಾಡುವಂತೆ ಪ್ಲೆಕಾರ್ಡ ಹಿಡಿದು ಮಕ್ಕಳ ಒತ್ತಾಯ.

ಕಾರವಾರ :- 68 ನೇ ಕನ್ನಡ ರಾಜ್ಯೋತ್ಸವದ ನಿಮಿತ್ತ (kannada rajyothsava)ಕಾರವಾರದ ಡಿ.ಆರ್.ಗ್ರೌಂಡ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯರ (district incharge minister) ನೇತ್ರತ್ವದಲ್ಲಿ ಕಾರ್ಯಕ್ರಮ ನಡೆಯುತ್ತಿರುವಾಗ ಶೀಘ್ರದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡುವಂತೆ ವಿದ್ಯಾರ್ಥಿಗಳು ಒತ್ತಾಯ ಮಾಡುವ ಪ್ಲೇಕಾರ್ಡ ಹಿಡಿದು ನೃತ್ಯ ರೂಪಕದ ಮೂಲಕ ಸಚಿವರ ಗಮನ ಸೆಳೆದರು.

ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಗಾಗಿ ( Multi Speciality Hospital )ನವಂಬರ್ 2 ರಂದು ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ನೇತ್ರತ್ವದಲ್ಲಿ ಶಿರಸಿಯಿಂದ ಕಾರವಾರದ ವರೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಪಾದಯಾತ್ರೆ ಸಹ ನಡೆಯುತಿದ್ದು ಹಿರಿಯ ಪತ್ರಕರ್ತ ವಿಶ್ವೇಶ್ವರ ಹೆಗಡೆ ,ಲೇಖಕ ಶಿವಾನಂದ ಕಳವೇ , ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಸೇರಿದಂತೆ ಅನೇಕ ಗಣ್ಯರು ಭಾಗವಹಿಸುತಿದ್ದು ದೊಡ್ಡ ಮಟ್ಟದಲ್ಲಿ ಹೋರಾಟಕ್ಕೆ ಸಿದ್ದವಾಗಿದೆ.

ಈ ಹಿಂದಿನ ಸರ್ಕಾರ ದಿಂದ ಬಜೆಟ್ ನಲ್ಲಿ ಜಾಗ ಸಹ ನಿಗದಿ ಮಾಡಿ ಘೋಷಣೆ ಮಾಡಿತ್ತು.ಆದ್ರೆ ಈವರೆಗೂ ಆಸ್ಪತ್ರೆ ಕನಸು ನನಸಾಗಿಲ್ಲ.ಹೀಗಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡುವಂತೆ ಸಾರ್ವಜನಿಕರಿಂದ ಒತ್ತಾಯ ಕೇಳಿಬಂದಿದ್ದು ಹೋರಾಟದ ರೂಪ ಪಡೆದಿದೆ.

ಇನ್ನು ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಸಹ ಪ್ರತಿಕ್ರಿಯಿಸಿದ್ದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ನಿರ್ಮಾಣ ಮಾಡುವ ಪ್ರಯತ್ನ ಸಾಗಿದೆ.ಒಂದು ವಾರದಲ್ಲಿ ಈ ಬಗ್ಗೆ ನಿರ್ಧಾರ ಪ್ರಕಟಿಸುತ್ತೇವೆ. ರಾಷ್ಟ್ರೀಯ ಹೆದ್ದಾರಿ 66 ರ ಕಳಪೆ ಕಾಮಗಾರಿಯಿಂದಾಗಿ ಅದೆಷ್ಟೋ ಜನರು ರಸ್ತೆ ಅಪಘಾತದಲ್ಲಿ ಸಾವು ಕಂಡಿದ್ದಾರೆ. ಅಪಘಾತದಲ್ಲಿ ಗಾಯ ಗೊಂಡವರಿಗೆ ಚಿಕಿತ್ಸೆ ನೀಡಲು ಉತ್ತಮ ವೈದ್ಯಕೀಯ (health) (medical)ವ್ಯವಸ್ಥೆ ಇಲ್ಲ, ಹೆದ್ದಾರಿ ಕಾಮಗಾರಿ ವಿಷಯದಲ್ಲಿ ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುತ್ತಿಲ್ಲ ಎಂದು ಹೇಳಿದರು.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!