BREAKING NEWS
Search

UttrakannadaNews: ಇಂದಿನ ಟಾಪ್ 6 ಸುದ್ದಿ ನೋಡಿ.

85

Bike accident :-ಬೈಕ್ ನಲ್ಲಿ ಓವರ್ ಟೇಕ್ ಮಾಡಲು ಸವಾರ ಸಾವು

ಕಾರವಾರ :- ಓವರ್‌ಟೇಕ್ ಮಾಡಲು ಹೋಗಿ ಬಸ್ ಕೆಳಗೆ ಬಿದ್ದ ಬೈಕ್ ಸವಾರ ಸಾವು ಕಂಡ ಘಟನೆ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಬಿಣಗಾ ಘಟ್ಟದಲ್ಲಿ ಇಂದು ನಡೆದಿದೆ. ಜೀತೇಂದ್ರ ಗೌಡ ಮೃತ ಬೈಕ್ ಸವಾರನಾಗಿದ್ದು ಅಂಕೋಲಾ ತಾಲ್ಲೂಕಿನ ಶಿರಗುಂಜಿ ಗ್ರಾಮದ ನಿವಾಸಿ ಯಾಗಿದ್ದಾನೆ.

ಅಂಕೋಲಾದಿಂದ ಕಾರವಾರಕ್ಕೆ ಬರುತ್ತಿದ್ದ ವೇಳೆ ಅಪಘಾತ ನಡೆದಿದ್ದು ರಸ್ತೆ ತಿರುವಿನಲ್ಲಿ ಬಸ್ ಓವರ್‌ಟೇಕ್ ಮಾಡುವ ವೇಳೆ ಎದುರಾದ ಕಂಟೇನರ್ ನನ್ನು ತಪ್ಪಿಸಲು ಹೋಗಿ ಬಸ್ ಕೆಳಗೆ ಬಿದ್ದ ಸವಾರ ಸಾವು ಕಂಡಿದ್ದು ಕಾರವಾರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Honnavara news:ಅಡಕೆ ಎಲೆಚುಕ್ಕೆ ರೋಗ: ರೈತರಿಗೆ ತರಬೇತಿ

ಹೊನ್ನಾವರ ತಾಲೂಕಿನ ಹಿರೇಬೈಲ್ ಗ್ರಾಮದ ವ್ಯಾಪ್ತಿಯ ಕೆಲುವೆಡೆ ಅಡಿಕೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡಿದ್ದು ಈ ರೋಗ ಹರಡದೆ ಇರಲು ಮುಂಜಾಗ್ರತ ಕ್ರಮವಾಗಿ ತೋಟಗಾರಿಕೆ ಇಲಾಖೆ ಹೊನ್ನಾವರ ರವರು ಸ್ಥಳೀಯ ರೈತರ ಸಹಕಾರದೊಂದಿಗೆ ದಿನಾಂಕ 30-09-2023 ರ ಮದ್ಯಾಹ್ನ 2-30ಕ್ಕೆ ಸರಿಯಾಗಿ ಶ್ರೀ ಈಶ್ವರ ಸೇವಾ ಸಭಾಭಾವನ ಹಿರೇಬೈಲ್ ನಲ್ಲಿ ರೈತರಿಗೆ ತರಬೇತಿ ಕಾರ್ಯ ಕ್ರಮ ಇಟ್ಟು ಕೊಂಡಿದ್ದು ಸದರಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆ ಯಲ್ಲಿ ರೈತರು ಪಾಲ್ಗೊಂಡು ತರಬೇತಿ ಸದುಪಯೋಗ ಪಡೆದು ಕೊಳ್ಳಲು ತೋಟಗಾರಿಕೆ ಇಲಾಖೆ ಕೋರಿಕೊಂಡಿದೆ.

Karwar:ಲಾಡ್ಜ್ ನಲ್ಲಿ ಯುವಕ ನೇಣಿಗೆ ಶರಣು.

ಲಾಡ್ಜ್ ನಲ್ಲಿ ಯುವಕ ನೇಣಿಗೆ ಶರಣಾದ ಘಟನೆ ಕಾರವಾರದ ನವತಾರ ಲಾಡ್ಜ್ ನಲ್ಲಿ ಇಂದುನಡೆದಿದೆ.
ನೇಣಿಗೆ ಶರಣಾದ ವ್ಯಕ್ತಿ ಗಜಾನನ್ ವಿಷ್ಣು ನಾಯ್ಕ್ (30) ಎಂದು ಗುರುತಿಸಲಾಗಿದ್ದು ,ತಾಯಿಯೊಂದಿಗೆ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದನು.ಗಣಪತಿ ನೋಡಿ ಬರುವುದಾಗಿ ಹೇಳಿ ಹೋಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ವಿಕಲಚೇತನ ವಿದ್ಯಾರ್ಥಿಗಳಿಂದ ಪ್ರಿ ಮೆಟ್ರಿಕ್ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಕಾರವಾರ:- ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವತಿಯಿಂದ 1 ರಿಂದ 10ನೇ ಪ್ರೀ-ಮೆಟ್ರಿಕ್ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಂದ ಸ್ಟೇಟ್ ಸ್ಕಾಲರ್ಶಿಪ್ ಫೋರ್ಟ್ಲ್ನಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹೊಸದಾಗಿ ನೋಂದಣಿ ಮತ್ತು URL for Fresh application: https://ssp.karnataka.gov.in/ssp2324/homenew.aspx URL for Renewalapplication: https://ssp.karnataka.gov.in/ssp2324/signin.aspx ಮಾಡಲು ಕಡ್ಡಾಯವಾಗಿ ಯು.ಡಿ.ಐ.ಡಿ.ವುಳ್ಳ ವಿಕಲಚೇತನ ವಿದ್ಯಾರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಿದ ಸ್ವೀಕೃತಿಯನ್ನು (Acknowledgement) ಎಲ್ಲಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಮುಂಡಗೋಡ, ಜೋಯಿಡಾ ಹಾಗೂ ತಾಲೂಕಿನ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು ತಾಲೂಕ ಪಂಚಾಯತ್ ಸಿದ್ದಾಪುರ, ಯಲ್ಲಾಪುರ, ಹಳಿಯಾಳ ರವರನ್ನು ಹಾಗೂ ಜಿಲ್ಲಾ ವಿಕಲಚೇತನರ ಕಛೇರಿ, ಜಿಲ್ಲಾ ಬಾಲಭವನ ಬಿಲ್ಡಿಂಗ್, ಎಂ.ಜಿ.ರಸ್ತೆ, ಉತ್ತರಕನ್ನಡ ಕಚೇರಿಗೆ ಸಲ್ಲಿಸಬೇಕು ಹಾಗೂ ಆಯಾ ತಾಲೂಕಿನ ವಿವಿದ್ದೋದೇಶ ಕಾರ್ಯಕರ್ತರನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382-200758 ಗೆ ಸಂಪರ್ಕಿಸಬಹು ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ. ಶಿಲ್ಲಾ .ಎಂ. ದೊಡ್ಡಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕಾರವಾರ:- ಕನಾಟಕ ಮರಾಠಿ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ(ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಬೇಜಾವು–ಜಲಭಾಗ್ಯ ಯೋಜನೆ(ಗಂಗಾ ಕಲ್ಯಾಣ ನೀರವರಿ ಯೋಜನೆ), ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಮರಾಠ ಮಿಲ್ಟಿç ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಾತಂತ್ರತ್ಯ ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಗಳಡಿ ಸಾಲ ಸೌಲಭ್ಯವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಸಾಲವನ್ನು ಪಡೆಯಲು ಇಚ್ಛಿಸುವವರು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ-3 ಬಿ ಅಡಿಯಲ್ಲಿ 2 (ಎ) ಯಿಂದ 2 (ಎಫ್) ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3 ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು, ಹಾಗೂ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಸರ್ಕಾರಿ ಸೌಲ್ಯಭ್ಯವನ್ನು (ಸಾಲ-ಸಹಾಯಧನ) ಪಡೆಯುವ ಸಂಬಂಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು, ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ 33%, ವಿಕಲಚೇತನರಿಗೆ ಶೇ.5%, ಹಾಗೂ ತೃತೀಯ ಲಿಂಗದವರಿಗೆ ಶೇ 1% ಮೀಸಲಾತಿ ಇರಿಸಿದೆ.

ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ. ಅಕ್ಟೋಬರ್ 30 ರೊಳಗಾಗಿ ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್ ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಯೋಜನೆಗಳ ಮಾರ್ಗಸೂಚಿಗಳು ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲೆ ವ್ಯವಸ್ಥಾಪಕರ ಕಚೇರಿ ವಿಳಾಸ ಹಾಗೂ ಹೆಚ್ಚಿನ ವಿವರಗಳನ್ನು https://kmcdc.karnataka.gov.in ಮೂಲಕ ನೋಡಬಹುದು ಅಥವಾ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ :9353808101, 08382-223229 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮರಾಠಿ ಸಮುದಾಯಗಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ:-ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ಕ್ಕೆ ಸಂಬಂದಪಟ್ಟ ಎಲ್ಲಾ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಿ , ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನಿಡಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಪೂರ್ಣಗೊಳಿಸಲು ಕೇವಲ 5 ಕಿಮೀ ವ್ಯಾಪ್ತಿಯಲ್ಲಿ ಮಾತ್ರ ಭೂ ಸ್ವಾಧೀನ ಸಮಸ್ಯೆಯಿದ್ದು, ಈ ಕುರಿತಂತೆ ಇರುವ ಸಮಸ್ಯೆಯನ್ನು ಜಿಲ್ಲಾಡಳಿತದ ಮೂಲಕ ಪರಿಹರಿಸಿಕೊಡಲಾಗುವುದು, ಭೂ ಸ್ವಾಧೀನದ ಪ್ರಕ್ರಿಯೆ ಪೂರ್ಣಗೊಂಡ ನಂತರ ನಿಗಧಿತ ಕಾಲವಧಿಯೊಳಗೆ ವ್ಯವಸ್ಥಿತ ರೀತಿಯಲ್ಲಿ ಸಂಪೂರ್ಣ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಕಾರವಾರದಲ್ಲಿ ಅವಳಿ ಟನಲ್ ನಿರ್ಮಾಣದಿಂದ 12 ಕಡೆಗಳಲ್ಲಿ ನೀರು ಹರಿಯುವ ನಾಲೆಗಳು ಬಂದ್ ಆಗಿ ಸಾರ್ವಜನಿಕರಿಗೆ ತೀವ್ರ ಸಮಸ್ಯೆಗಳಾಗುತಿದ್ದು, ಈ ಕುರಿತಂತೆ ಪರಿಶೀಲಿಸಿ ನೀರು ಹರಿಯಲು ಪರ್ಯಾಯ ವ್ಯವಸ್ಥೆ ಕೈಗೊಳ್ಳುವಂತೆ ತಿಳಿಸಿದರು.
ಅವಳಿ ಟನಲ್ ಮೂಲಕ ವಾಹನ ಸಂಚಾರ ಆರಂಭಿಸುವ ಕುರಿತಂತೆ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಟನಲ್ ಕಾರ್ಯಕ್ಷಮತೆ ಮತ್ತು ಟನಲ್ನಲ್ಲಿ ಸಂಚರಿಸುವ ವಾಹನಗಳು ಮತ್ತು ಸಾರ್ವಜನಿಕರ ಸುರಕ್ಷತೆ ಕುರಿತಂತೆ ಮುಚ್ಚಳಿಕೆ ಬರೆದುಕೊಡುವಂತೆ ತಿಳಿಸಿದ್ದು, ಅವರು ಈ ಬಗ್ಗೆ ಲಿಖಿತ ಮುಚ್ಚಳಿಕೆ ಬರೆದುಕೊಟ್ಟಲ್ಲಿ ತಕ್ಷಣವೇ ಟನಲ್ ನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.
ಟನಲ್ ಆರಂಭಿಸುವ ಕುರಿತ ಇಂದು ಕರೆದಿರುವ ಪ್ರಮುಖ ಸಭೆಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಪ್ರಮುಖ ಅಧಿಕಾರಿಗಳು ಗೈರು ಹಾಜರಾಗಿರುವ ಬಗ್ಗೆ ಜಿಲ್ಲಾಧಿಕಾರಿಗಳು ತೀವ್ರ ಅಸಮಧಾನ ವ್ಯಕ್ತಪಡಿಸಿದರು.

ಸಭೆಯಲ್ಲಿ ಶಾಸಕ ಸತೀಶ್ ಸೈಲ್, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಉಪ ಪ್ರಬಂಧಕ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!