BREAKING NEWS
Search

kumta:ಸಾರ್ವಜನಿಕ ಸ್ಥಳದಲ್ಲಿ ಕಾಣಿಸಿಕೊಳ್ಳುತಿದ್ದ ಚಿರತೆ ಸೆರೆ

83

ಕಾರವಾರ : ಜನವಸತಿ ಪ್ರದೇಶದಲ್ಲಿ ಓಡಾಡುತ್ತಿದ್ದ ಚಿರತೆಯನ್ನು ( ಸೆರೆ ಹಿಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಹೆಗಡೆ ಗ್ರಾಮದಲ್ಲಿ ನಡೆದಿದೆ.

ಹೆಗಡೆ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ಜನವಸತಿ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡು ಜನರಲ್ಲಿ ಆತಂಕ ತಂದೊಡ್ಡಿತ್ತು. ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದರು. ಡಿಆರ್‌ಎಫ್‌ಓ ರಾಘವೇಂದ್ರ ಹೂವಣ್ಣ ನೇತೃತ್ವದಲ್ಲಿ ಬೋನನ್ನು ಇಟ್ಟು ಕಾರ್ಯಾಚರಣೆ ನಡೆಸಿದ್ದು ಎರಡು ದಿನಗಳ ಕಾರ್ಯಾಚರಣೆ ಬಳಿಕ ಚಿರತೆ ಸೆರೆ ಸಿಕ್ಕಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!