BREAKING NEWS
Search

ಶಿರಸಿಯಲ್ಲಿ ರಸ್ತೆಮೇಲೆ ಕಡಿದ ಸ್ಥಿತಿಯಲ್ಲಿ ಬಿದ್ದ ಹಸುವಿನ ತಲೆ ವೈರಲ್!

222

ಶಿರಸಿ:- ದೇಹದಿಂದ ಕತ್ತರಿಸಿದ ಸ್ಥಿತಿಯಲ್ಲಿ ನಡು ರಸ್ತೆಯಲ್ಲಿ ಗೋವಿನ ತಲೆ ಪತ್ತೆಯಾಗಿದ್ದು ಆತಂಕ‌ ಸೃಷ್ಟಿಸಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹೆಗಡೆಕಟ್ಟಾ ಬಳಿ ಈ ಘಟನೆ ನಡೆದಿದೆ.

ರಸ್ತೆ ಮೇಲೆ ಗೋವಿನ ತಲೆಯನ್ನು ದೇಹದಿಂದ ಬೇರ್ಪಡಿಸಿ ಇಟ್ಟಿರುವ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಕೂಡ ಆಗಿದೆ. ಪೊದೆಯಲ್ಲಿ ಎಸೆದಿದ್ದ ಗೋವಿನ ತಲೆಯನ್ನು ನಾಯಿಗಳು ಕಚ್ಚಿಕೊಂಡು ರಸ್ತೆ ಮಧ್ಯೆ ತಂದಿರಬಹುದು ಎಂದು ಅಂದಾಜಿಸಲಾಗಿದೆ.

ಫೋಟೋದ ಮೇಲೆ ಕ್ಲಿಕ್ ಮಾಡಿ ಸುದ್ದಿ ಓದಿ:-ಕಾರವಾರದ ಸೈಕೋ ಜೀವನ ಕಥೆ ಇದೀಗ ಸಿನಿಮಾ!

ಹೆಗಡೆಕಟ್ಟಾದಿಂದ ಕಾನಳ್ಳಿ ರಸ್ತೆಗೆ ತೆರಳುವ ಮಧ್ಯ ಈ ದೃಶ್ಯ ಕಂಡುಬಂದಿದೆ.ಸ್ಥಳಕ್ಕೆ ಭೇಟಿ ನೀಡಿದ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ:- ಕಾರವಾರ ಪತ್ರಿಕಾ ಭವನಕ್ಕೆ ಪದಾಧಿಕಾರಿಗಳ ಆಯ್ಕೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!