ಶಿರಸಿಯಲ್ಲಿ ಅಬ್ಬರದ ಮಳೆಗೆ ಲಕ್ಷಾಂತರ ರುಪಾಯಿ ಹಾನಿ

185

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ
ರಾತ್ರಿ ಸುರಿದ ಭಾರಿ ಮಳೆಗೆ ಶಿರಸಿ ತಾಲೂಕಿನ ಬಿಸಲಕೊಪ್ಪದಲ್ಲಿ ಭಾರಿ ಹಾನಿ ಸಂಭವಿಸಿದೆ.


ಅಬ್ಬರದ ಗಾಳಿಯಿಂದ ಕೂಡಿದ ಮಳೆಯಿಂದಾಗಿ 12 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಸಂಭವಿಸಿದೆ.ರಸ್ತೆ ಮೇಲೆ ಮರ ಉರುಳಿ ಬಿದ್ದು ರಸ್ತೆ ಸಂಪರ್ಕ ಕಡಿತ ಗೊಂಡಿದ್ದು ಐದಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿದೆ.ಇನ್ನು ಅಡಿಕೆ ತೋಟ ಹಾಗೂ ಬಾಳೆ ತೋಟಗಳಿಗೂ ಹಾನಿಯಾಗಿದ್ದು ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಜಿಲ್ಲೆಯ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಗಾಳಿಯಿಂದ ಕೂಡಿದ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!