Uttra Kannada news

Uttrakannada: ಜಿಲ್ಲೆಯ ಇಂದಿನ ಟಾಪ್ 3 ಸುದ್ದಿಗಳು.

98

Bhatkal:ಆಕಸ್ಮಿಕ ಬೋಟ್ ಗೆ ಬೆಂಕಿ- ಎರಡು ಲಕ್ಷ ನಷ್ಟ.

Bhatkal :-ಬಂದರಿನಲ್ಲಿ ನಿಲ್ಲಿಸಿಟ್ಟಿದ್ದ ಬೋಟ್ ಗೆ ಆಕಸ್ಮಿಕ ಬೆಂಕಿ ತಗಲು ಸುಟ್ಟುಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಂದರಿನಲ್ಲಿ ನಡೆದಿದೆ.

ನರಸಿಂಹ ಗೋವಿಂದ ಖಾರ್ವಿ ಎಂಬುವವರಿಗೆ ಸೇರಿದ ಬೋಟ್ ಇದಾಗಿದ್ದು ಕಳೆದ ಮೂರು ವರ್ಷದಿಂದ ರಿಪೇರಿ ಕಾರ್ಯಕ್ಕಾಗಿ ಬಂದರಿನಲ್ಲಿ ನಿಲ್ಲಿಸಲಾಗಿತ್ತು.ಆದರೇ ಏಕಾಏಕಿ ಬೆಂಕಿ ಹೊತ್ತಿಕೊಂಡು ಉರಿದು ಹೋಗಿದ್ದು ಯಾರೋ ಕಿಡಿಗೇಡಿಗಳು ಮಾಡಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ. ಅಗ್ನಿ ಅವಘಡದಲ್ಲಿ 2ಲಕ್ಷಕ್ಕೂ ಹೆಚ್ಚು ನಷ್ಟವಾಗಿದ್ದು ಘಟನೆ ಸಂಬಂಧ ಭಟ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Yallapura:ಇನೋವಾ ಕಾರಿಗೆ ಬೈಕ್ ಡಿಕ್ಕಿ -ಇಬ್ಬರು ಸಾವು

ಕಾರವಾರ:-ರಸ್ತೆ ಬದಿ ನಿಂತಿದ್ದ ಇನೋವಾ ಕಾರಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲಿ ಇಬ್ಬರ ಸಾವು ಕಂಡು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಪಟ್ಟಣದಲ್ಲಿ ನಡೆದಿದೆ.

ಯಲ್ಲಾಪುರ ಪಟ್ಟಣದ ಶಾನಭಾಗ ಹೋಟೆಲ್ ಎದರು ಬೈಕ್‌ನಲ್ಲಿ ಟ್ರಿಬಲ್ ರೈಡಿಂಗ್ ಮಾಡಿಕೊಂಡು ಅತೀ ವೇಗದಲ್ಲಿ ಕಾರಿನ ಹಿಂಭಾಗಕ್ಕೆ ಡಿಕ್ಕಿಹೊಡದ ಪರಿಣಾಮ ಘಟನೆ ನಡೆದಿದೆ.

ಘಟನೆಯಲ್ಲಿ ದರ್ಶನ್ ಭಂಡಾರಿ (16), ರಾಜು (17) ಸಾವನ್ನಪ್ಪಿದ ಯುವಕರಾಗಿದ್ದು ಬೈಕ್ ನಲ್ಲಿದ್ದ ಜಾಬೀರ್ (16) ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಸಂಬಂಧ ಯಲ್ಲಾಪುರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Karwar:ದೇವಾಲಯಗಳಿಗೆ ಕೂಡಲೇ ಹಣ ಬಿಡುಗಡೆಗೆ ಮಾಜಿ ಶಾಸಕಿ ರೂಪಾಲಿ ನಾಯ್ಕ ಆಗ್ರಹ

ಕಾರವಾರ:- ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ದೇವಾಲಯಗಳ ಅಭಿವೃದ್ಧಿಗೆ ಮಂಜೂರಾದ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸರ್ಕಾರ ಇರುವಾಗ ದೇವಾಲಯಗಳ ಅಭಿವೃದ್ಧಿಗೆ ಒಟ್ಟೂ 11 ಕೋಟಿ ರೂ. ಯೋಜನೆ ರೂಪಿಸಲಾಗಿತ್ತು. ಆ ಪ್ರಕಾರ ಮೊದಲ ಹಂತದಲ್ಲಿ 2 ಕೋಟಿ ರೂ. ಕ್ರಿಯಾಯೋಜನೆ ರೂಪಿಸಿ ಸರ್ಕಾರದಿಂದ ಹಣ ಬಿಡುಗಡೆಯಾಗಿದ್ದು, ವಿವಿಧ, ದೇವಾಲಯಗಳಿಗೆ ನೀಡಲಾಗಿದೆ.
ಎರಡನೇ ಹಂತದಲ್ಲಿ 4 ಕೋಟಿ ರೂ. ಬಿಡುಗಡೆಯಾಗಿ ದೇವಾಲಯಗಳಿಗೆ ಹಸ್ತಾಂತರಿಸಲಾಗಿದೆ.
ಬಿಜೆಪಿ ಸರ್ಕಾರ ಇದ್ದಾಗ ಮೂರೂ ಹಂತದ ಅನುದಾನ ಮಂಜೂರಾತಿ ಆದೇಶ ಆಗಿತ್ತು. ಎರಡು ಹಂತದ ಹಣ ಬಿಡುಗಡೆಯೂ ಆಗಿತ್ತು. ಅದನ್ನು ಆಯಾ ದೇವಾಲಯಗಳಿಗೆ ಹಸ್ತಾಂತರಿಸಲಾಗಿದ್ದು, ಅಭಿವೃದ್ಧಿ ಕಾಮಗಾರಿಯೂ ನಡೆಯುತ್ತಿದೆ. ಅಷ್ಟರಲ್ಲಿ ವಿಧಾನಸಭೆ ಚುನಾವಣೆ ನಡೆದು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂತು. ಆದರೆ ಕಾಂಗ್ರೆಸ್ ಸರ್ಕಾರ
ಮೂರನೇ ಹಂತದ 5 ಕೋಟಿ ರೂ. ಬಿಡುಗಡೆಗೆ ಮುಂದಾಗಲಿಲ್ಲ. ಬಿಜೆಪಿ ಸರ್ಕಾರ ಇರುವಾಗ ಸರ್ಕಾರಿ ಆದೇಶವಾಗಿದ್ದರೂ ಈಗಿನ ಸರ್ಕಾರ ಇದುವರೆಗೆ ಈ ಬಗ್ಗೆ ಯಾವುದೆ ಕ್ರಮ ಕೈಗೊಂಡಂತೆ ಕಾಣಿಸುತ್ತಿಲ್ಲ.

ತಮ್ಮ ದೇವಾಲಯಗಳ ಅಭಿವೃದ್ಧಿಗೆ ಸರ್ಕಾರದಿಂದ ಹಣ ಬಿಡುಗಡೆಯಾಗಲಿದೆ ಎಂದು ಕೆಲವೆಡೆ ಇರುವ ಕಟ್ಟಡ ನಿರ್ಮಾಣಕ್ಕೆ ಯೋಜಿಸಿದ್ದರು. ಸರ್ಕಾರದ ಹಣದ ನಿರೀಕ್ಷೆಯಲ್ಲಿ ಕೆಲವೆಡೆ ಪ್ರಾಥಮಿಕ ಕಾಮಗಾರಿಗಳನ್ನೂ ಆರಂಭಿಸಿದ್ದರು. ಆದರೆ ಈಗ ಹಣ ಬಿಡುಗಡೆಯಾಗದೆ ಇರುವುದಿಂದ ಆ ಎಲ್ಲ ದೇವಾಲಯಗಳ ಅಭಿವೃದ್ಧಿ ಕಾರ್ಯ ನೆನೆಗುದಿಗೆ ಬಿದ್ದಂತಾಗಿದೆ. ದೇವಾಲಯಗಳ ಆಡಳಿತ ಮಂಡಳಿಯವರು ತೀವ್ರ ನಿರಾಶರಾಗಿದ್ದಾರೆ.
ನಾನು ವಿಶೇಷ ಪ್ರಯತ್ನದಿಂದ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಕ್ಷೇತ್ರದ ಹಲವು ದೇವಾಲಯಗಳ ಅಭಿವೃದ್ಧಿಗೆ 11 ಕೋಟಿ ರೂ.ಗಳನ್ನು ನೀಡಲು ಯೋಜನೆ ರೂಪಿಸಿದ್ದು ಅದರಂತೆ ಆದೇಶವೂ ಆಗಿತ್ತು. ಈಗಿನ ಸರ್ಕಾರ ಯಾವ ಕಾರಣಕ್ಕೆ ದೇವಾಲಯಗಳಿಗೆ ನೀಡಬೇಕಾದ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲ ಎನ್ನುವುದು ತಿಳಿಯುತ್ತಿಲ್ಲ. ಯಾವುದೇ ಅಭಿವೃದ್ಧಿ ಕಾಮಗಾರಿ ಸರ್ಕಾರದಿಂದ ನಡೆಯುತ್ತಿಲ್ಲ. ಇದು ಜನತೆಯಲ್ಲೂ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ದೇವಸ್ಥಾನಗಳಿಗೂ ಹಣ ಕೊಡಲು ಹಿಂದೇಟು ಹಾಕುತ್ತಿರುವುದು ವಿಷಾದದ ಸಂಗತಿಯಾಗಿದೆ. ದೇವಾಲಯಕ್ಕೂ ಹಣ ನೀಡದಷ್ಟು ಬಡತನ ಸರ್ಕಾರಕ್ಕೆ ಬಂದಿದೆಯೇ ಅಥವಾ ಉದ್ದೇಶಪೂರ್ವಕವಾಗಿ ಸೇಡಿನ ರಾಜಕಾರಣ ಮಾಡುತ್ತಿದ್ದಾರೆಯೇ ಎನ್ನುವ ಪ್ರಶ್ನೆ ಉದ್ಭವವಾಗಿದೆ ಎಂದು ಅವರು ಸರ್ಕಾರದ ನಡೆಯನ್ನು ಟೀಕಿಸಿದರು.

ಕೂಡಲೇ ಮೂರನೇ ಹಂತದ ಹಣ ಬಿಡುಗಡೆ ಮಾಡಬೇಕು . ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಜಿಲ್ಲಾಧಿಕಾರಿ ಕೂಡಲೆ ಈ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕೆಂದು ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಆಗ್ರಹಿಸಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!