ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಸೇರಿ 10 ಮಂದಿಗೆ ಹೈಕೋರ್ಟ್‌ನಿಂದ ಜಾಮೀನು

ವಿನಯ್ ಕುಲಕರ್ಣಿಗೆ ಹೈಕೋರ್ಟ್‌ನಿಂದ ಜಾಮೀನು | ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅಮಾನತು
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದ ಮಾಜಿ ಸಚಿವ ವಿನಯ್ ಕುಲಕರ್ಣಿ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದ ಮಾಜಿ ಸಚಿವ ವಿನಯ್ ಕುಲಕರ್ಣಿ
ವಿನಯ್ ಕುಲಕರ್ಣಿ

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಸೇರಿ 10 ಮಂದಿಗೆ ಹೈಕೋರ್ಟ್‌ನಿಂದ ಜಾಮೀನು.

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ (yogesh gawda)ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ (vinay kulakarni) ಕರ್ನಾಟಕ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ.

ಇದನ್ನೂ ಓದಿ:- Court case :ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ 

ಪ್ರಕರಣದಲ್ಲಿ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 10 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.

Advertisement

ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡುವಂತೆ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಅವರ ಮನವಿಯನ್ನು ಪರಿಗಣಿಸಿ ಈ ಆದೇಶ ನೀಡಿದೆ.

ಜಾಮೀನು ಮಂಜೂರು ಮಾಡುವ ವೇಳೆ ಪ್ರತಿಯೊಬ್ಬ ಆರೋಪಿಯೂ ಇಬ್ಬರು ಶ್ಯೂರಿಟಿಗಳನ್ನು ಒದಗಿಸಬೇಕು ಹಾಗೂ ₹5 ಲಕ್ಷ ಮೊತ್ತದ ಬಾಂಡ್ ಸಲ್ಲಿಸಬೇಕು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ.

ಹೈಕೋರ್ಟ್‌ನ ಈ ಆದೇಶದೊಂದಿಗೆ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೆ ಸಂಬಂಧಿಸಿದ ಅನಿಶ್ಚಿತತೆ ಕೂಡ ನಿವಾರಣೆಯಾದಂತಾಗಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement